ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಮಾಡಿ 1,500 ಕೋಟಿ ರೂ. ವೈಟ್ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ಮಾಡಿ 1500 ಕೋಟಿ ವೈಟ್ ಮಾಡಿಕೊಂಡಿದ್ದಾರೆ. ಬ್ರಾಂಡ್ ಬೆಂಗಳೂರಿನಿಂದ 1500 ಕೋಟಿ ದುಪ್ಪಟ್ಟು ಆಗಬಾರದು, ಪ್ರಾಮಾಣಿಕವಾಗಿ ಅಭಿವೃದ್ಧಿಗೆ ಅವರು ಕೆಲಸ ಮಾಡಲಿ ಎಂದು ಹೇಳಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪೆಂಡಿಂಗ್ ವಿಚಾರದಲ್ಲಿ ನನ್ನ ಬ್ಲ್ಯಾಕ್ ಮೇಲ್ ಮಾಡುವುದಕ್ಕೆ ಆಗಲ್ಲ ಎಂಬ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ಯಾರಿಂದಲೂ ಡಿ.ಕೆ.ಶಿವಕುಮಾರ್ ನ ಬ್ಲಾಕ್ ಮೇಲ್ ಮಾಡಲು ಸಾಧ್ಯವೇ ಇಲ್ಲ. ಆದ್ರೆ ಅವರು ಯಾರನ್ನು ಬೇಕಾದ್ರೂ ಬ್ಲಾಕ್ ಮೇಲ್ ಮಾಡ್ತಾರೆ. ಎಲ್ಲರನ್ನೂ ಬ್ಲಾಕ್ ಮೇಲ್ ಮಾಡುವ ಸಾಮರ್ಥ್ಯ ಡಿ.ಕೆ.ಶಿವಕುಮಾರ್ ಗೆ ಮೊದಲಿನಿಂದಲೂ ಇದೆ ಎಂದರು.