ಬೆಂಗಳೂರು : ಬರಗಾಲಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಸಡಿಲಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಒಪ್ಪಿದರೆ ಇನ್ನೊಂದು ವಾರದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಘೋಷಣೆಯ ಮಾರ್ಗಸೂಚಿ ಸಡಿಲಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಸಮ್ಮತಿ ಸೂಚಿಸಿದ್ರೆ ಇನ್ನೊಂದು ವಾರದಲ್ಲಿ ಬರಗಾಲ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ ಶೇ. 22 ರಷ್ಟು ಮಳೆ ಕೊರತೆ ಕಂಡು ಬಂದಿದೆ. ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತಾದರೂ ಶೇ. 61.72 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆಯಾಗಿದೆ. 5.54 ಲಕ್ಷ ಕ್ವಿಂಟಾಲ್ ಭತ್ತದ ಬೀಜದ ಬೇಡಿಕೆಯಿದ್ದು, 3.22 ಲಕ್ಷ ಕ್ವಿಂಟಾಲ್ ವಿತರಿಸಿದ್ದು, ಇನ್ನೂ ದಾಸ್ತಾನಿದೆ ಎಂದು ಹೇಳಿದ್ದಾರೆ.