alex Certify BIGG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ’ : ಶಿಕ್ಷಣ ಇಲಾಖೆ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ’ : ಶಿಕ್ಷಣ ಇಲಾಖೆ ಅನುಮತಿ

ಬೆಂಗಳೂರು : 2023_24ನೇ_ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಸಂಕಲನಾತ್ಮಕ ಮೌಲ್ಯಮಾಪನ-2(SA-2) ವಾರ್ಷಿಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಅನುಮತಿ ನೀಡಿದೆ.

ಕರ್ನಾಟಕ ಶಿಕ್ಷಣ ಕಾಯ 1983 ರ ಕಲಂ 22 ರಂತ ವಿವಿಧ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯನ್ನು ಸಕ್ಷಮ ಪ್ರಾಧಿಕಾರವೆಂದು ಸರ್ಕಾರದ ಅಧಿಸೂಚನೆ ಸಂಖ್ಯೆ: ಇಪಿ 209 ಎಸ್‌ಎಲ್‌ಬಿ 2023 ದಿನಾಂಕ: 07/10/2023 ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಹೊರಡಿಸಿರುವ ಹಿನ್ನೆಲೆಯಲ್ಲಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕಾಯ್ದೆ 1966 ರ ಕಲಂ 15 (a)(iv) ರಲ್ಲಿ ಇತರ ಪರೀಕ್ಷೆಗಳನ್ನು ನಡೆಸಲು ಅವಕಾಶವಿದ್ದು, ಅದರಂತೆ 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ 5, 8, 9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿದೆ. ಹಾಗೂ ಸದರಿ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಹಾಗೂ ವಾರ್ಷಿಕ ಪರೀಕ್ಷೆಯನ್ನು ನಡೆಸುವ ಸಂಬಂಧ ಪ್ರತಿ ವರ್ಷ ಸರ್ಕಾರಿ ಆದೇಶವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...