alex Certify BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಗೆ ಶಿಕ್ಷಣ ಇಲಾಖೆಯಿಂದ ಹೊಸ ಐಡಿಯಾ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಗೆ ಶಿಕ್ಷಣ ಇಲಾಖೆಯಿಂದ ಹೊಸ ಐಡಿಯಾ!

ಬೆಂಗಳೂರು : ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಮುಂದಿನ ಬಾರಿ ನಡೆಯುವ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸದಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಾಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.

ಕಳೆದ ವರ್ಷ ರಾಜ್ಯದ 724 ಜಿಲ್ಲಾ, 755 ತಾಲೂಕು, 604 ಹೋಬಳಿ ಮತ್ತು 1,222 ಗ್ರಾಮೀಣ ಪ್ರದೇಶದ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟಾರೆ 3,305 ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಗ್ರಾಮೀಣ ಪ್ರದೇಶಗಳಿಗೆ ಕೊಕ್ ನೀಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಆದ್ಯತೆ ನೀಡುವಂತೆ ಹೇಳಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...