ಬೆಂಗಳೂರು : ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮ ದಿನವಾದ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸೂಚನೆ ನೀಡಿದೆ.
ಮೌಲಾನಾ ಅಬುಲ್ ಕಲಾಂರವರ ಜನ್ಮದಿನ ನವೆಂಬರ್-11 ಆಗಿರುವುದರಿಂದ ದಿನಾಂಕ:11.11.2023 ರಂದು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸುವಂತೆ ಸಂಬಂಧಿಸಿದ ಎಲ್ಲರಿಗೂ ತಿಳಿಸಲು ಕ್ರಮವಹಿಸಬೇಕೆಂದು ಕೋರಲಾಗಿದೆ.
ಈ ಹಿನ್ನಲೆಯಲ್ಲಿ, ದಿನಾಂಕ 13.11.203 ರಂದು ಮೌಲಾನಾ ಅಬ್ದುಲ್ ಕಲಾಂ ಆಜಾದ್ ರವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಬೇಕು ಎಂದು ತಿಳಿಸಲಾಗಿರುವುದನ್ನು ದಿನಾಂಕ: 11.11.2023 ರಂದು ಮೌಲಾನಾ ಅಬುಲ್ ಕಲಾಂ ಆಜಾದ್ ರವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಬೇಕು ಎಂದು ತಿದ್ದಿ. ಓದಿಕೊಳ್ಳತಕ್ಕದ್ದು, ಮತ್ತು ಅದರಂತೆ ಕ್ರಮವಹಿಸಲು ರಾಜ್ಯದ ಎಲ್ಲಾ ಸರ್ಕಾರಿ,ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಸ್ಕರಿಗೆ ಮತ್ತು ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.