ಬೆಂಗಳೂರು : ಎಸ್ಎಸ್ಎಲ್ ಸಿ (SSLC), ಪಿಯುಸಿ (PUC) ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಡೆಸಲಾಗುವ ಪೂರಕ ಪರೀಕ್ಷೆಯನ್ನು ಎರಡು ಬಾರಿ ನಡೆಸಲು ಚಿಂತನೆ ನಡೆಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಯುಸಿ ಮತ್ತು ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗೆ ಎರಡು ಬಾರಿ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಶೇ. 50 ರಷ್ಟು ಮಾತ್ರ ಉತ್ತೀರ್ಣರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎರಡು ಬಾರಿ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.
ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ಎಸ್ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮೊದಲ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾದ 15 ದಿನಗಳ ಒಳಗೆ ಎರಡನೇ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಈ ಮೂಲಕ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ವರದಾನವಾಗಿದೆ.