ಬೆಂಗಳೂರು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದೆ.
ಮಾರ್ಚ್/ಏಪ್ರಿಲ್ ನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪರೀಕ್ಷಾ ಕೇಂದ್ರಗಳ ರಚನೆ, ಮತ್ತು ನಕಲು ರಹಿತವಾಗಿ ಪರೀಕ್ಷೆ ನಡೆಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಲ್ಲೇಖ Iರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಅದರಂತೆ ಆಯಾ ಜಿಲ್ಲೆಗಳಿಂದ ಪರೀಕ್ಷಾ ಕೇಂದ್ರಗಳನ್ನು ರಚಿಸಿ, ಜಿಲ್ಲಾವಾರು ಪರೀಕ್ಷಾ ಕೇಂದ್ರಗಳ ಕರಡು ಪಟ್ಟಿ ಕುರಿತು ಉಲ್ಲೇಖ-2ರ ನೋಡಲ್ ಅಧಿಕಾರಿಗಳ ಸಭೆಗಳಲ್ಲಿ ವಿವರವಾಗಿ ಚರ್ಚಿಸಲಾಗಿರುತ್ತದೆ. ಸದರಿ ಸಭೆಗಳಲ್ಲಿ ಚರ್ಚಿಸಿರುವಂತೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹಾಗೂ ಅನುಬಂಧದಲ್ಲಿ ತಿಳಿಸಿರುವ ಅಂಶಗಳನ್ನು ಆಧರಿಸಿ ನಮೂನೆ-1, 2, 3 ಮತ್ತು 4ರಲ್ಲಿರುವಂತೆ ಪರೀಕ್ಷಾ ಕೇಂದ್ರಗಳ ಅಂತಿಮ ಪಟ್ಟಿಯನ್ನು ದಿನಾಂಕ: 22-09-2023ರ ಒಳಗಾಗಿ ಸಹಾಯಕ ನಿರ್ದೇಶಕರು, ಸಿ-ಶಾಖೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-1, ಇವರ ವಿಳಾಸಕ್ಕೆ ಅಂಚೆ ಮುಖೇನ ಹಾಗೂ ಸಾಫ್ಟ್ ಕಾಪಿಯನ್ನು sadpi.csec.kseeb@gmail.com ಈ- ಮೇಲ್ ವಿಳಾಸಕ್ಕೆ ಕಳುಹಿಸಲು ಸೂಚಿಸಿದೆ.
1 ಮಾರ್ಚ್/ಏಪ್ರಿಲ್-2024ರ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಶಾಲೆಗಳು ಹೊಂದಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.
2 ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಲ್ಲಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು ಕಡ್ಡಾಯ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಂಖ್ಯೆಯ ಕೊಠಡಿಗಳ ಆಸನದ ವ್ಯವಸ್ಥೆಗಾಗಿ ಪೀಠೋಪಕರಣಗಳು, ಶಾಲೆಯ ಸುತ್ತ ಕಾಂಪೌಂಡ್, ಶೌಚಾಲಯ, ಕುಡಿಯುವ ನೀರು, ಸಿಸಿಟಿವಿ ಕ್ಯಾಮೆರ ಅಳವಡಿಸಿರುವಿಕೆ, ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸೂಕ್ತ ಸಾರಿಗೆ ವ್ಯವಸ್ಥೆ, ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯದಲ್ಲಿ ಸುರಕ್ಷಿತವಾಗಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಲು ರಸ್ತೆ ಮಾರ್ಗ ಮುಂತಾದ ಎಲ್ಲಾ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲಿಸುವುದು ಅತ್ಯವಶ್ಯಕವಾಗಿದೆ.
3 ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ ಮಾಡುವುದು.
4 ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.
5 ಶಾಲಾ/ಕಾಲೇಜಿನಲ್ಲಿರುವ ಮೂಲಭೂತ ಸೌಕರ್ಯ ಹಾಗೂ ಕೊಠಡಿ ಸಂಖ್ಯೆಗಳನ್ನು ಆಧರಿಸಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 400 ಅಭ್ಯರ್ಥಿಗಳು ಗರಿಷ್ಠ 800 ಅಭ್ಯರ್ಥಿಗಳವರೆಗೂ ಆಸನದ ವ್ಯವಸ್ಥೆ ಇರುವ ಸಾಮರ್ಥ್ಯವನ್ನು ಪರಿಗಣಿಸಿ ನಗರ/ಗ್ರಾಮೀಣ ಪ್ರದೇಶದಲ್ಲಿ 10 ಕಿ.ಮೀ.ಸುತ್ತ(ರೇಡಿಯಸ್) ಬರುವ ಶಾಲೆಗಳ ವಿದ್ಯಾರ್ಥಿಗಳನ್ನು ಸೇರಡೆಗೊಳಿಸಿ ಕ್ಲಸ್ಟರ್‌ಸಹಿತ ಪರೀಕ್ಷಾ ಕೇಂದ್ರಗಳನ್ನಾಗಿ ರಚಿಸುವುದು. ಗ್ರಾಮಾಂತರ ಪ್ರದೇಶದ ಶಾಲೆಗಳು ತಾಲ್ಲೂಕು/ಜಿಲ್ಲಾ ಕೇಂದ್ರಗಳಿಗೆ ಬಸ್ಸಿನ ಅನಾನುಕೂಲವಿದ್ದಲ್ಲಿ ಹಾಗೂ ಕ್ಲಸ್ಟರ್ ಸಹಿತ ಪರೀಕ್ಷಾ ಕೇಂದ್ರಗಳನ್ನು ರಚಿಸಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ ಮಾತ್ರ ಕ್ಲಸ್ಟರ್‌ರಹಿತ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.
6 ಗ್ರಾಮಾಂತರ ಪ್ರದೇಶದಲ್ಲೇ ಹೆಚ್ಚು ಶಾಲೆಗಳಿದ್ದಲ್ಲಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು, ಒಂದು ಪ್ರದೇಶದಲ್ಲಿ ಒಂದಕ್ಕಿಂತ ಹೆಚ್ಚು ಪರೀಕ್ಷಾ ಕೇಂದ್ರಗಳನ್ನು ರಚಿಸಲು ಅವಕಾಶವಿದ್ದಲ್ಲಿ ಕ್ಲಸ್ಟರ್‌ಸಹಿತ ಪರೀಕ್ಷಾ ಕೇಂದ್ರಗಳನ್ನಾಗಿ ಮಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡುವುದು.
7 ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಹಂಚಿಕೆ ಮಾಡುವಾಗ, ಶಾಲೆಯಿಂದ ಪರೀಕ್ಷಾ ಕೇಂದ್ರಕ್ಕೆ ಇರುವ ದೂರ, ಪರೀಕ್ಷಾ ಕೇಂದ್ರ ತಲುಪಲು ಬೇಕಾದ ಸಮಯ ಹಾಗೂ ಪರೀಕ್ಷಾ ಕೇಂದ್ರದಲ್ಲಿರುವ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಪರಿಗಣಿಸುವುದು,
8 ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರ ಅಳವಡಿಸುವ ಕುರಿತು ಅಗತ್ಯ ಕ್ರಮವಹಿಸುವುದು.
9 ಸಿಸಿಟಿವಿ ಕ್ಯಾಮೆರಗಳು ಪರೀಕ್ಷಾ ದಿನಗಳಲ್ಲಿ 24 ಗಂಟೆಯಲ್ಲೂ ಕೆಲಸ ನಿರ್ವಹಿಸುವಂತಿರಬೇಕು.
10 ಸಿಸಿಟಿವಿ ಕ್ಯಾಮರ ಅಳವಡಿಸದೇ ಇರುವ ಪರೀಕ್ಷಾ ಕೇಂದ್ರಗಳನ್ನು ರಚಿಸಲು ಅನಿವಾರ್ಯವಾಗಿ ಉಪನಿರ್ದೇಶಕರು ಶಿಫಾರಸ್ಸು ಮಾಡಿದಲ್ಲಿ, ದಿನಾಂಕ: 25.01.2024 ರೊಳಗೆ ಸಿ.ಸಿ.ಟಿ.ವಿ.ಕ್ಯಾಮರ ಅಳವಡಿಸುವ ಬಗ್ಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರಿಂದ ಛಾಪಾ ಕಾಗದದಲ್ಲಿ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು.
11 ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೇರ್ಪಡೆ ಮಾಡಿರುವ ಶಾಲೆಯ ಶಾಲಾ ಸಂಕೇತ, ಶಾಲೆಯ ಹೆಸರು ಮತ್ತು ಸಂಪೂರ್ಣ ಅಂಚೆ ವಿಳಾಸವನ್ನು ಸ್ಪಷ್ಟವಾಗಿ ನಮೂದಿಸುವುದು ಕಡ್ಡಾಯ.
12 ಕ್ಲಸ್ಟರ್ ಸಹಿತ/ಕ್ಲಸ್ಟರ್ ರಹಿತ ಪರೀಕ್ಷಾ ಕೇಂದ್ರಗಳನ್ನು ರಚಿಸುವಾಗ, ಕ್ಲಸ್ಟರ್ ವಲಯದ ಹೆಸರು ಹಾಗೂ ಪರೀಕ್ಷಾ ಕೇಂದ್ರದ ಸಂಕೇತವನ್ನು ಕಡ್ಡಾಯವಾಗಿ ನಮೂದಿಸುವುದು.
13 ಖಾಸಗಿ ಅಭ್ಯರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ರಚಿಸದೇ ಸದರಿ ಅಭ್ಯರ್ಥಿಗಳನ್ನು ತಾಲ್ಲೂಕು ಕೇಂದ್ರದಲ್ಲಿರುವ ಸಾಮಾನ್ಯ(ರೆಗ್ಯುಲರ್)ಪರೀಕ್ಷಾ ಕೇಂದ್ರಗಳಿಗೆ ಹಂಚಿಕೆ ಮಾಡುವುದು.
14 ವಿಭಾಗ ಮಟ್ಟದ ಎಸ್.ಎಸ್.ಎಲ್.ಸಿ. ನೋಡಲ್ ಅಧಿಕಾರಿಗಳ ಸಭೆಗಳಲ್ಲಿ ಚರ್ಚಿಸಿದಂತೆ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಕಡಿಮೆ ಮಾಡುವುದು, ಪರೀಕ್ಷಾ ಕೇಂದ್ರಗಳ ಸಂಖ್ಯೆ ಕಡಿಮೆಯಾದಷ್ಟು ಪರೀಕ್ಷಾ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ನಿಗಾವಹಿಸಲು ಅನುಕೂಲವಾಗುತ್ತದೆ.
15 ಪರೀಕ್ಷಾ ಅವ್ಯವಹಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಹುಮಹಡಿ ಕಟ್ಟಡವಿರುವ ಪರೀಕ್ಷಾ ಕೇಂದ್ರಗಳಲ್ಲಿ ಸಾಧ್ಯವಾದಷ್ಟು ಪರೀಕ್ಷೆಗೆ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಮಾಡದೇ ಮೊದಲನೇ ಮಹಡಿಯಿಂದ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡುವುದು, ಪರೀಕ್ಷಾ ಕೇಂದ್ರದಲ್ಲಿ ವಿಕಲಚೇತನ ವಿದ್ಯಾರ್ಥಿಗಳಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಮಾಡುವುದು, 16. ಬೆಟ್ಟಗುಡ್ಡ ಪ್ರದೇಶ, ಅಣೆಕಟ್ಟುಗಳ ಪ್ರದೇಶ, ನದಿ ತಪ್ಪಲಿನ ಪ್ರದೇಶ, ಇನ್ನಿತರ ನೈಸರ್ಗಿಕ ಕಾರಣಗಳಿದ್ದಲ್ಲಿ ಪರೀಕ್ಷಾ ಕೇಂದ್ರ ರಚನೆಯ ನಿಯಮವನ್ನು ಸಡಿಲಗೊಳಿಸುವುದು.
17 ಅನವಶ್ಯಕವಾಗಿ ನಿಯಮ ಮೀರಿ ಹಾಗೂ ಇನ್ನಿತರೇ ಕಾರಣಗಳಿಂದ ಹೆಚ್ಚುವರಿಯಾಗಿ ಹೊಸ ಪರೀಕ್ಷಾ ಕೇಂದ್ರಗಳಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತಿಲ್ಲ.
18 ಒಂದು ವೇಳೆ ಯಾವುದೇ ಶಾಲೆಯನ್ನು ಮೊದಲು ಜೋಡಣೆ ಮಾಡಿದ ಕೇಂದ್ರದಿಂದ ಬೇರೊಂದು ಕೇಂದ್ರಕ್ಕೆ ಬದಲಾಯಿಸಿ, ಜೋಡಣೆ ಮಾಡುವಂತಹ ಸಂದರ್ಭದಲ್ಲಿ ಸರಿಯಾದ ಕಾರಣವಿದ್ದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬದಲಾಯಿಸತಕ್ಕದ್ದು, ಈ ಸಂಬಂಧ ದೂರುಗಳು ಬಂದರೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರನ್ನೇ ಜವಾಬ್ದಾರರನ್ನಾಗಿಸಲಾಗುವುದು,
19 ಒಂದೇ ಕ್ಲಸ್ಟರ್ ವಲಯದಲ್ಲಿ ಶಾಲೆಗಳ ಸಂಖ್ಯೆ ಹೆಚ್ಚು ಇದ್ದು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಲ್ಲಿ ಕ್ಲಸ್ಟರ್ ಕೇಂದ್ರಗಳನ್ನು ಹೆಚ್ಚುವರಿಯಾಗಿ ಆಯ್ಕೆ ಮಾಡಿ ಕ್ಲಸ್ಟರ್ ವಲಯಗಳನ್ನಾಗಿ ರಚಿಸುವುದು,
20 ಈಗಾಗಲೇ ನಿಮ್ಮ ಜಿಲ್ಲೆಯಲ್ಲಿ ಅತಿಸೂಕ್ಷ್ಮ, ಸೂಕ್ಷ್ಮ ಹಾಗೂ ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಆವ್ಯವಹಾರ ಪ್ರಕರಣಗಳಿದ್ದಲ್ಲಿ, ಅಂತಹ ಕೇಂದ್ರಗಳನ್ನು ರದ್ದುಪಡಿಸುವುದು. ಯಾವುದೇ ಕಾರಣಕ್ಕೂ ಅಂತಹ ಕೇಂದ್ರಗಳನ್ನು ಯಾರೇ ಶಿಫಾರಸ್ಸು ಮಾಡಿದರೂ ಸಹ ಮನಃ ಪರೀಕ್ಷಾ ಕೇಂದ್ರ ರಚಿಸದಂತೆ ನೋಡಿಕೊಳ್ಳುವುದು.
21 ಈ ಹಿಂದಿನ ಪರೀಕ್ಷೆಗಳಲ್ಲಿ ಕ್ಲಸ್ಟರ್ ಸಹಿತ ಪರೀಕ್ಷಾ ಕೇಂದ್ರಗಳನ್ನು ರಚಿಸಲು ಅವಕಾಶವಿದ್ದಾಗಿಯೂ, ಕ್ಲಸರ್ ರಹಿತ ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ರಚಿಸಿರುವುದು ಮಂಡಲಿಯ ಗಮನಕ್ಕೆ ಬಂದಿರುತ್ತದೆ.ರೀತಿಯ ಶಿಫಾರಸ್ಸುಗಳು ಪ್ರಸ್ತುತ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಲು ತಿಳಿಸಿದೆ. ವರ್ಷದ ಪರೀಕ್ಷಾ ಕೇಂದ್ರಗಳ ರಚನೆಯಲ್ಲಿ
22 ಪರೀಕ್ಷಾ ಕೇಂದ್ರಗಳ ರಚನೆಯ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾ ಉಪನಿರ್ದೇಶಕರು(ಆಡಳಿತ), ಜಿಲ್ಲಾ ನೋಡಲ್ ಅಧಿಕಾರಿಗಳು ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಾಣಾಧಿಕಾರಿಗಳಿಗೆ ವಹಿಸಲಾಗಿದ್ದು, ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಆಕ್ರಮಗಳು ನಡೆದಲ್ಲಿ,ಆಯಾ ಉಪನಿರ್ದೇಶಕರು(ಆಡಳಿತ) ರವರನ್ನೇ ಸಂಪೂರ್ಣ ಹೊಣೆಗಾರರನ್ನಾಗಿ ಮಾಡಲಾಗುವುದು.
23 ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹತ್ತಿರದ ಪರೀಕ್ಷಾ ಕೇಂದ್ರಗಳಿಗೆ ಸೇರ್ಪಡೆ ಮಾಡುವ ಬಗ್ಗೆ ಕ್ರಮವಹಿಸುವುದು.ಪ್ರವೇಶ ಪತ್ರ ಪಡೆದ ನಂತರ ಉಪನಿರ್ದೇಶಕರು/ಕ್ಷೇತ್ರ ಶಿಕ್ಷಣಾಧಿಕಾರಿಗಳು/ಶಾಲಾ ಮುಖ್ಯ ಶಿಕ್ಷಕರು ಪರೀಕ್ಷಾ ಕೇಂದ್ರಕ್ಕೂ ಹಾಗೂ ಶಾಲೆಗೂ ದೂರವಾಗುತ್ತಿದೆ ಎಂಬ ಕಾರಣ ನೀಡಿ ಪರೀಕ್ಷಾ ಕೇಂದ್ರದ ಬದಲಾವಣೆ ಪುರಸ್ಕರಿಸುವುದಿಲ್ಲ. ಮಾಡಲು ಮನವಿ ಸಲ್ಲಿಸಿದಲ್ಲಿ ಯಾವುದೇ ಕಾರಣಕ್ಕೂ ಪುರಸ್ಕರಿಸುವುದಿಲ್ಲ.