ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕೊರತೆ ಸೃಷ್ಟಿಯಾದ್ರೆ ಕೃಷಿ ಬೆಳೆಗಳಿಗೆ ಸಮಸ್ಯೆಯಾಗದಂತೆ ಬೆಳೆ ಆಧಾರದ ಮೇಲೆ ವಿದ್ಯುತ್ ಪೂರೈಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಬೆಳೆಗಳಿಗೆ ಸಮಸ್ಯೆಯಾಗದಂತೆ ಬೆಳೆ ಆಧಾರದ ಮೇಲೆ ವಿದ್ಯುತ್ ಪೂರೈಸಲು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಇಂಧನ ಇಲಾಖೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಆದ್ಯತೆ ಮೇರೆಗೆ ರೈತರ ಬೆಳೆಗಳಿಗೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಕಬ್ಬು ಪ್ರಧಾನವಾಗಿರುವ ಮಂಡ್ಯದಲ್ಲಿ ಕಬ್ಬು ಬೆಳೆಗೆ ಯಾವ ತಿಂಗಳಲ್ಲಿ ಹೆಚ್ಚು ವಿದ್ಯುತ್ ಪೂರೈಕೆ ಮಾಡಬೇಕು. ಕೋಲಾರದಲ್ಲಿ ಟೊಮೊಟೋ, ವಿಜಯಪುರದಲ್ಲಿ ದ್ರಾಕ್ಷಿ, ಭತ್ತ ಬೆಳೆಯುವ ಕಡೆ ಯಾವ ಸಮಯದಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.