ಬೆಳಗಾವಿ : ‘ಜ್ಯೋತಿ ಸಂಜೀವಿನಿ ಯೋಜನೆ’ ಯನ್ನು ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ವಿಧಾನಪರಿಷತ್ ನಲ್ಲಿ ಮಾತನಾಡಿದ ನೀಡಿದ ಸಿಎಂ ಸಿದ್ದರಾಮಯ್ಯ ಬಡವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜ್ಯೋತಿ ಸಂಜೀವಿನಿ ಯೋಜನೆ’ ಯನ್ನು ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಜ್ಯೋತಿ ಸಂಜೀವಿನಿ ಯೋಜನೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸುವ ಸಂಬಂಧ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಲಾಗುವುದು, ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗ್ಯಾರಂಟಿಗಳಿಗೆ 38 ಸಾವಿರ ಕೋಟಿ ಮೀಸಲು
ಸಮಾಜದಲ್ಲಿನ ಅವಕಾಶ ವಂಚಿತರೆಲ್ಲರೂ ನನ್ನ ಜನ. ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವೆಲ್ಲರಿಗೂ ಶಕ್ತಿ ತುಂಬಬೇಕು. ಕೇಂದ್ರ ಸರ್ಕಾರವು ಇಂತಹ ಕ್ರಮವನ್ನು ತೆಗೆದುಕೊಳ್ಳಲಿ, ಇದಕ್ಕಾಗಿ ಸರ್ವ ಪಕ್ಷ ನಿಯೋಗ ಹೋಗೋಣ. 2008 ರಿಂದ 2013 ರವರೆಗೆ 22 ಸಾವಿರ ಕೋಟಿ ವೆಚ್ಚ ಮಾಡಲಾಗಿತ್ತು. ಆದರೆ ನಾನು ಅಧಿಕಾರ ಬಿಡುವಾಗ ಎಸ್.ಸಿ / ಎಸ್.ಟಿ ಜನರಿಗೆ ರೂ.88 ಸಾವಿರ ಕೋಟಿ ಅನುದಾನವನ್ನು ನೀಡಲಾಗಿತ್ತು. ಇದು ಕಾಂಗ್ರೆಸ್ ಸರ್ಕಾರದ ಸಾಧನೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕ ಹಕ್ಕು ಇಲ್ಲ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಹಾಗು ಸಂವಿಧಾನಕ್ಕೆ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗ್ಯಾರಂಟಿಗಳಿಗೆ 38 ಸಾವಿರ ಕೋಟಿ ರೂ.ವನ್ನು ಗ್ಯಾರಂಟಿ ಜಾರಿಯಾದ 1-8-2023 ರಿಂದ ಮಾರ್ಚ್ ವರೆಗೆ ಮೀಸಲಿಟ್ಟಿದೆ. ಎಲ್ಲವೂ ಪಾರದರ್ಶಕವಾಗಿದೆ. ರೈತರಿಗೆ ಬೇರೆ ಕಾರ್ಯಕ್ರಮಗಳನ್ನು ನೀಡಿರುವುದರಿಂದ ಈ ಬಾರಿ 4,000 ರೂ. ಇಟ್ಟಿಲ್ಲ. ಈ ಬಾರಿ 38 ಸಾವಿರ ಕೋಟಿ ಗ್ಯಾರಂಟಿಗಳಿಗೆ ನೀಡಿದೆ. ಫಲಾನುಭವಿಗಳು ಸಂತೋಷವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಬಗ್ಗೆ ಬಿಜೆಪಿಯವರು ಕೇವಲ ಮಾತನಾಡುತ್ತಾರೆ. 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಂದ ಕಾನೂನನ್ನು ಬಿಜೆಪಿ ಸರ್ಕಾರ ಯಾವ ರಾಜ್ಯದಲ್ಲಿಯೂ ಮಾಡಿಲ್ಲ. ಇಡೀ ದೇಶದಲ್ಲಿ ತೆಲಂಗಾಣ ಬಿಟ್ಟರೆ ಕರ್ನಾಟಕವೊಂದೇ ಇಂತಹ ಕಾನೂನನ್ನು ಮಾಡಿರುವುದು. ವಿರೋಧ ಪಕ್ಷದವರು ಯಾಕೆ ಸುಮ್ಮನಿದ್ದಾರೆ? ಎಂದು ಸಿಎಂ ಪ್ರಶ್ನಿಸಿದರು.