ಬೆಂಗಳೂರು : ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಲಾಗಿದೆ.
ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದ್ದಾರೆ.
ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇಂದು ಹೈಕೋರ್ಟ್ ನಲ್ಲಿ ನಟ ಉಪೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಟ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸದಂತೆ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ ಅವರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ಗೆ ತಡೆ ನೀಡಿದೆ.
ಈ ನಡುವೆ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ಸದಾಶಿವನಗರದಲ್ಲಿರುವ ನಟ ಉಪೇಂದ್ರ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಕೆಎಸ್ಆರ್ಪಿ ತುಕಡಿ, ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.