ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಣ ನಿಯಂತ್ರಣ ವಿಭಾಗದ ಲ್ಯಾಬ್ & ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,9 ಮಂದಿಗೆ ಗಂಭೀರ ಗಾಯಗಳಾಗಿದೆ. ಘಟನೆ ಸಂಬಂಧ ಇದೀಗ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್ದೂರು ದಾಖಲಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.