ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ಜು.21 ರ ಸಂಜೆ 4 ಗಂಟೆಗೆ ವಿಶ್ವವಿದ್ಯಾಲಯ ಮುಖ್ಯ ಆವರಣ, ಇರುವಕ್ಕಿಯಲ್ಲಿ ಆಯೋಜಿಸಲಾಗಿದೆ. ಘಟಿಕೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ ತಿಳಿಸಿದರು.
ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಇವರ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ಸುಗ್ಗಿ ಸಂಭ್ರಮ ಜರುಗಲಿದ್ದು, ಪದವೀಧರರಿಗೆ ಪದವಿ ಪ್ರಧಾನ ಮಾಡುವರು. ಕೃಷಿ ಸಚಿವರು ಹಾಗೂ ವಿವಿ ಸಹ-ಕುಲಾದಿಪತಿಗಳಾದ ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದೆ. ಪದ್ಮವಿಭೂಷಣ ಪ್ರಶಸ್ತಿ ವಿಜೇತರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ವೀರೇಂದ್ರ ಹೆಗ್ಗಡೆ ಅವರು 8ನೇ ಘಟಿಕೋತ್ಸವ ಭಾಷಣ ಮಾಡುವರು ಎಂದು ತಿಳಿಸಿದ್ದಾರೆ.