alex Certify BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಹತ್ವದ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇದುವರೆಗೆ ನನಗೆ ವಿಶೇಷವಾಗಿ ಏನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಿರ್ಧಾರ ಮಾಡ್ತಾರೆ. ನನಗೆ ಇದುವರೆಗೆ ವಿಶೇಷವಾಗಿ ಏನೂ ಗೊತ್ತಿಲ್ಲ, ಸದ್ಯಕ್ಕೆ ನಾನು ದೆಹಲಿಗೆ ಹೋಗುತ್ತಿಲ್ಲ ಎಂದರು.

ಸಿದ್ದರಾಮಯ್ಯ ಈ ಹಿಂದೆ ಬಿಜೆಪಿ ಸೇರಲು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಭೇಟಿಯಾಗಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಆದೆಲ್ಲಾ ಏನೂ ಇಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...