ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತ ವಿಚಾರ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರವೇ ದೆಹಲಿ ಪ್ರವಾಸ ಕೈಗೊಂಡು ಬಿಜೆಪಿ ವರಿಷ್ಠರ ಜೊತೆಗೆ ಮೈತ್ರಿ ಕುರಿತಂತೆ ಅಂತಿಮ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ಅಥವಾ ನಾಡಿದ್ದು ದೆಹಲಿಗೆ ಭೇಟಿ ನೀಡಿ ಬಿಜೆಪಿ ವರಿಷ್ಠರ ಜೊತೆಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಭಾಗವಾಗಿ ಸೇರಲು ಜೆಡಿಎಸ್ ಮಹತ್ವದ ಹೆಜ್ಜೆ ಇಟ್ಟಿದ್ದು, ನಾಳೆ ದೆಹಲಿಗೆ ಪ್ರವಾಸ ಕೈಗೊಳ್ಳಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯ ಬಿಜೆಪಿ ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಜೊತೆಗೆ ಮೈತ್ರಿಯಾದ್ರೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆಲ್ಲಬಹುದು ಎಂಬ ವಿಶ್ವಾಸದ ಜೊತೆಗೆ ಕಾಂಗ್ರೆಸ್ ಅನ್ನು ಲೋಕಸಭೆ ಚುನಾವಣೆಯಲ್ಲಿ ಕಟ್ಟಿಹಾಕಬಹುದು ಎಂಬ ಲೆಕ್ಕಚಾರದಲ್ಲಿ ಜೆಡಿಎಸ್ ಇದ್ದು, ಇದರ ಭಾಗವಾಗಿ ಕಳೆದ ತಿಂಗಳು ದೆಹಲಿಗೆ ಭೇಟಿ ನೀಡಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ನಾಳೆ ಅಥವಾ ನಾಡಿದ್ದು ಭೇಟಿ ನೀಡಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಮಾತುಕತೆ ನಡೆದಿದೆ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ನಮ್ಮ ವರಿಷ್ಠರು ಮತ್ತು ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ.ಈಗಾಗಲೇ ಹೆಚ್.ಡಿ.ದೇವೇಗೌಡರು ಕೆಲವೊಂದು ಭಾವನೆ ವ್ಯಕ್ತಪಡಿಸಿದ್ದಾರೆ. ಮಾತುಕತೆ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ಆಗುತ್ತದೆ ಎಂದರು