alex Certify BIGG NEWS : ಆಗಸ್ಟ್ 18 ಅಥವಾ 20 ರಂದು `ಗೃಹಲಕ್ಷ್ಮೀ ಯೋಜನೆ’ಗೆ ಚಾಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಆಗಸ್ಟ್ 18 ಅಥವಾ 20 ರಂದು `ಗೃಹಲಕ್ಷ್ಮೀ ಯೋಜನೆ’ಗೆ ಚಾಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3,15,692 ಜನರಿಗೆ ಪ್ರಯೋಜನ ದೊರೆಯಲಿದೆ ಎಂದು  ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷಿö್ಮÃ ಆರ್ ಹೆಬ್ಬಾಳ್ಕರ್ ಹೇಳಿದರು.

ಅವರು ಇಂದು ಕುಂಜಿಬೆಟ್ಟು ಕ.ವಿ.ಪ್ರ.ನಿ.ನಿ ನೌಕರರ ಸಂಘದ ಸಭಾಭವನದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.  ರಾಜ್ಯದಲ್ಲಿನ ಎಲ್ಲಾ ಭಾಷೆ, ಜಾತಿ, ಧರ್ಮದವರ ಶ್ರೇಯೋಭಿವೃದ್ಧಿಗಾಗಿ ಚುನಾವಣೆಗೂ ಮುನ್ನ ಸರ್ಕಾರ ಘೋಷಿಸಿದ್ದ ಐದು ಯೋಜನೆಗಳಲ್ಲಿ, ಗೃಹಜ್ಯೋತಿ ಯೋಜನೆ ಆರಂಭದ ನಂತರ, ಮೂರು ಯೋಜನೆಗಳು ಕೇವಲ ಮೂರು ತಿಂಗಳಲ್ಲಿ ಜಾರಿಯಾದಂತಾಗಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಸರ್ವರಿಗೂ ಸಮ ಪಾಲು ಸಮ ಬಾಳು ಎಂಬ ತತ್ವದಡಿಯಲ್ಲಿ ರಾಜ್ಯವನ್ನು ಪ್ರಗತಿಯುತ್ತ ಮುನ್ನೆಡೆಸುತ್ತಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ ಶಕ್ತಿ, ಅನ್ನಭಾಗ್ಯ ಯೋಜನೆ ಜಾರಿಯಾಗಿದೆ. ಈಗ ಗೃಹಜ್ಯೋತಿ ಆರಂಭವಾಗಿದೆ. ಇದೇ ಆಗಸ್ಟ್ 18 ಅಥವಾ 20 ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶದ ಮೂಲಕ ಗೃಹಲಕ್ಷ್ಮೀ ಯೋಜನೆ ಜಾರಿಯಾಗಲಿದೆ. ಬೆಲೆ ಏರಿಕೆಯಿಂದಾಗಿ ತತ್ತರಿಸಿ ಹೋಗಿದ್ದ ಜನರಿಗೆ ಭರವಸೆ ತುಂಬುವುದಕ್ಕಾಗಿ ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಘೋಷಣೆ ಮಾಡಿತು ಎಂದರು.

   ರಾಜ್ಯದ 1.42 ಕೋಟಿ ಗ್ರಾಹಕರು ಗೃಹಜ್ಯೋತಿ, 1.28 ಕೋಟಿ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯಲಿದ್ದು, ಶಕ್ತಿಯೋಜನೆಯಡಿ ಇದುವರೆಗೆ 30 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಗೃಹಲಕ್ಷಿö್ಮ ಯೋಜನೆಯಡಿ 1.28 ಕೋಟಿ ಕುಟುಂಬಗಳಿಗೆ ಡಿಬಿಟಿ ಮೂಲಕ  ಪ್ರತೀ ತಿಂಗಳು ರೂ.2000 ನೀಡಲಿದ್ದು, ಇದಕ್ಕಾಗಿ ಇದುವರೆಗೆ 1 ಕೋಟಿ ಕುಟುಂಬಗಳ ಮಹಿಳೆಯರು ನೊಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 3,15,692 ಗ್ರಾಹಕರಿದ್ದು, ಈ ಪೈಕಿ ಶೇ.80 ರಷ್ಟು ಅಂದರೆ 2,69,949 ಗ್ರಾಹಕರು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊAಡಿದ್ದಾರೆ. ನಮ್ಮ ಸರ್ಕಾರದಿಂದ ರಾಜ್ಯ ಸುಭದ್ರ ಮತ್ತು ಪ್ರಗತಿಪಥ ದತ್ತ ಮುನ್ನಡೆಯಲಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...