alex Certify BIGG NEWS : `ಗೃಹಲಕ್ಷ್ಮೀ ಯೋಜನೆ’ಗೆ `ಪ್ರಜಾ ಪ್ರತಿನಿಧಿ’ ನೇಮಕಕ್ಕೆ ಮಾರ್ಗಸೂಚಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಗೃಹಲಕ್ಷ್ಮೀ ಯೋಜನೆ’ಗೆ `ಪ್ರಜಾ ಪ್ರತಿನಿಧಿ’ ನೇಮಕಕ್ಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಪ್ರಜಾಪ್ರತಿನಿಧಿ ನೇಮಕ ಮಾಡಲು ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

20-05-2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಡಿದ ತಾತ್ವಿಕ ಅನುಮೋದನೆ ಮೇರೆಗೆ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ ‘ಗೃಹಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಹಾಗೂ ಈ ಯೋಜನೆಯ ವಿವರವಾದ ರೂಪುರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.

ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ “ಗೃಹಲಕ್ಷ್ಮಿ” ಯೋಜನೆಯನ್ನು 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಏಕಕಡತದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿದಾರರು ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್‌ಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಕೇಂದ್ರಗಳಲ್ಲಿ ಉಂಟಾಗಬಹುದಾಗ ಒತ್ತಡವನ್ನು ತಪ್ಪಿಸುವ ಸಲುವಾಗಿ Mobile App ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲು ಪುಜಾ ಪ್ರತಿನಿಧಿ” (Citizen Volunteer)ಗಳನ್ನು ನೇಮಕ ಮಾಡುವ ಕುರಿತು ದಿನಾಂಕ: 16-06-2023ರಂದು ಮಾನ್ಯ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಲಾಗಿರುತ್ತದೆ. ಅದರಂತೆ ದಿನಾಂಕ: 16-06-2023ರಂದು ನಡೆದ ಸಭೆಯ ನಡವಳಿಯಂತ “ಪುಜಾ ಪ್ರತಿನಿಧಿ” (Citizen Volunteer)ಗಳ Application Develop ಮಾಡಲು ಇ-ಆಡಳಿತ ಇಲಾಖೆಯವರು Mail ಮೂಲಕ ಕೋರಿರುವ ವಿವರಗಳಂತೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಸರ್ಕಾರಕ್ಕೆ ಪುಸ್ತಾವನ ಸಲ್ಲಿಸಿರುತ್ತಾರೆ.

ಇದರೊಂದಿಗೆ ಲಗತ್ತಿಸಿರುವ ಮಾರ್ಗಸೂಚಿಯನ್ವಯ ಪುಜಾ ಪ್ರತಿನಿಧಿ” (Citizen Volunteer) ಗಳನ್ನು ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಲು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...