
ಹೋಸಪೇಟೆ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 26 ರಿಂದ ವಸತಿ ಇಲಾಖೆಗೆ ಸಂಬಂಧಿಸಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 26 ರಿಂದ ಪ್ರತಿ ಜಿಲ್ಲೆಯಲ್ಲಿ ವಸತಿ ಇಲಾಖೆ ಜನಸ್ಪಂದನೆ ಕಾರ್ಯಕ್ರಮ ಆಯೋಜಿಸಲಾಗುವುದು. ಜನಸ್ಪಂದನ ಕಾರ್ಯಕ್ರಮ ಸಂಬಂಧ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಹಂಪಿ ಉತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲಾಗುವುದು. ನವೆಂಬರ್ ನಲ್ಲೇ ಹಂಪಿ ಉತ್ಸವ ಆಚರಣೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.