ಬೆಂಗಳೂರು : ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮವನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಕೆಲಸ ಮಾಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿಲ್ಲ. ಹಿಂದೂ ಧರ್ಮವನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಕೆಲಸ ಮಾಡಿದ್ದೇನೆ. ನಾವೆಲ್ಲಾ ಹಿಂದೂಗಳು ಬೆಳಗ್ಗೆ ಎದ್ದರೆ ಗಣಪತಿ ಪೂಜೆ ಮಾಡುತ್ತೇವೆ. ನಾನು ಬೆಳಗ್ಗೆ ಎದ್ದ ಕೂಡಲೇ ಲಕ್ಷ್ಮೀ ಶ್ಲೋಕಾ ಹೇಳುತ್ತೇನೆ, ಮಲಗುವ ಮುನ್ನ ಹನುಮನ ಶ್ಲೋಕಾ ಹೇಳುತ್ತೇನೆ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ್ದ ಪರಮೇಶ್ವರ್ ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟು ಹಾಕಿದರು ಎಂಬುದು ಇಂದಿಗೂ ಪ್ರಶ್ನೆಯಾಗಿಯೇ ಉಳಿದಿದೆ. ಬೌದ್ಧ ಧರ್ಮ ಹುಟ್ಟಿದ್ದು ಭಾರತದಲ್ಲಿ. ಜೈನ ಧರ್ಮವು ಭಾರತದಲ್ಲಿ ತನ್ನ ಬೇರುಗಳನ್ನು ಹೊಂದಿದೆ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಗಳು ವಿದೇಶಗಳಿಂದ ಬಂದವು. ಆದರೆ ನೀವು ವಿಶ್ಲೇಷಿಸಿದರೆ, ಈ ಎಲ್ಲ ಸಾರಾಂಶವು ಮನುಕುಲಕ್ಕೆ ಒಳ್ಳೆಯದನ್ನು ಮಾಡುವುದಾಗಿದೆ ಎಂದು ಹೇಳಿದ್ದರು.