
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೆಲ ನಿಯಮಗಳನ್ನು ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ಕೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ಸಂಬಂಧ “ಶಾಲಾ/ಕಾಲೇಜುಗಳ ಆವರಣದಿಂದ 100 ಮೀಟರ್ ಗಳ ಅಂತರದಲ್ಲಿ ತಂಬಾಕುಯುಕ್ತ ವಸ್ತುಗಳ ಮಾರಾಟ ನಿಷೇಧದ ಬಗ್ಗೆ ಸೂಕ್ತ ಕ್ರಮವಹಿಸಿ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ಶಾಲಾ ಆವರಣವು ಶಾಲೆಯಲ್ಲಿ ಮಕ್ಕಳಿಗೆ ದೈನಂದಿನ ಪಾಠ ಪುವಚನಗಳೊಂದಿಗೆ ಪಠೇತರ ಚಟುವಟಿಕೆಗಳು ಮತ್ತು ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗವಾಗಬೇಕು. ಯಾವುದ ಕಾರಣಕ್ಕೂ ಶೈಕ್ಷಣಿಕೇತರ ಚಟುವಟಿಕೆಗಳಿಗೆ/ ಉದ್ದೇಶಗಳಿಗೆ ಬಳಸಬಾರದಾಗಿ ಹಾಗೂ ಅನುಮತಿ ನೀಡಬಾರದಾಗಿ ಸೂಚಿಸಲಾಗಿರುತ್ತದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಶಾಲಾ ಅವಧಿಯಲ್ಲಿ ಹಾಗೂ ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016ನ್ನು ಜಾರಿಗೆ ತಂದಿದ್ದು, ಇದರಲ್ಲಿ ಶಾಲೆಗಳಲ್ಲಿ ಮಕ್ಕಳು ಶೋಷಣೆಗೊಳಗಾಗುವುದನ್ನು ತಪ್ಪಿಸಲು ಕಡ್ಡಾಯವಾಗಿ ಅನುಸರಿಸಬೇಕಾದ ಕ್ರಮಗಳನ್ನೊಳಗೊಂಡ ನೀತಿಯನ್ನು ರೂಪಿಸಿ ಕಾರ್ಯರೂಪಕ್ಕೆ ತಂದಿರುತ್ತದೆ.
ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಜಾಹಿರಾತು, ನಿಷೇಧ ಮತ್ತು ವ್ಯಾಪಾರ ವಾಣಿಜ್ಯ ಉತ್ಪಾದನೆ ಪೂರೈಕೆ ಮತ್ತು ವಿತರಣೆ ನಿಯಂತ್ರಣ ) ಅಧಿನಿಯಮ- 2003ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಸರ್ಕಾರಿ, ಅನುದಾನಿತ, ಮತ್ತು ಅನುದಾನರಹಿತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ತಂಬಾಕುಯುಕ್ತ ಉತ್ಪನ್ನಗಳಿಂದ ಶಾಲಾ ಮಕ್ಕಳು/ಕುಟುಂಬ/ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಹಾಗೂ ಪೋಷಕರಿಗೆ ಪರಿಪೂರ್ಣವಾಗಿ ಅರಿವು ಮೂಡಿಸಲು ಎಸ್.ಡಿ.ಎಂ.ಸಿ ಹಾಗೂ ಶಾಲಾಭಿವೃದ್ಧಿ ಸಮಿತಿ/ಶಿಕ್ಷಕರು/ರಕ್ಷಕ ಸಮಿತಿ/ಮಕ್ಕಳ ಸುರಕ್ಷಾ ಸಮಿತಿ ಹಾಗೂ ಎನ್.ಸಿ.ಸಿ, ಎನ್.ಎಸ್.ಎಸ್ ಇನ್ನಿತರ ಸಮಿತಿಗಳ ಪೂರ್ಣ ಸಹಕಾರ ಪಡೆದು ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ.
ಮಾದಕ ವಸ್ತುಗಳ ಮಾರಾಟ, ಹಾಗೂ ಬಳಕೆಯ ವಿರುದ್ಧ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೋಲೀಸರು 1908 ಎಂಬ ನಾಲ್ಕು ಅಂಕಿಗಳ ಶುಲ್ಕ ರಹಿತ ದೂರವಾಣಿಯನ್ನು ಪರಿಚಯಿಸಿದ್ದು, ಇದನ್ನು ಇಲಾಖೆಗೆ ಪರಿಚಯಿಸಿ ಸದ್ಬಳಕ ಮಾಡಿಕೊಳ್ಳಲು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 1908 ಎಂಬ ನಾಲ್ಕು, ಅಂಕಿಗಳ ಶುಲ್ಕ ರಹಿತ ದೂರವಾಣಿ ಸಂಖ್ಯೆಯನ್ನು ಪರಿಚಯ ಮಾಡುವ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರಿಗೆ ಕ್ರಮವಹಿಸಲು ಸೂಕ್ತ ನಿರ್ದೇಶನ ನೀಡಲಾಗಿರುತ್ತದೆ.
ಸರಕು ಸಾಗಾಣಿಕೆ ವಾಹನಗಳಲ್ಲಿ ಕೂಲಿ ಕಾರ್ಮಿಕರು/ಶಾಲಾ ಮಕ್ಕಳು ಹಾಗೂ ಇನ್ನಿತರ ಪ್ರಯಾಣಿಕರನ್ನು ಕಾನೂನುಬಾಹಿರವಾಗಿ ಸಾಗಿಸುತ್ತಿರುವ ಬಗ್ಗೆ ಉಚ್ಚನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 12181/2019ಅನ್ನು ಕರ್ನಾಟಕ ಕಾನೂನು ಸೇವೆಗಳ ದಾಖಲಿಸಲಾಗಿದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟಲು ಪರಿಣಾಮಕಾರಿಯಾದ ಕ್ರಿಯಾಯೋಜನೆಯನ್ನು ರೂಪಿಸಿ ಈ ಬಗ್ಗೆ ಪೋಲೀಸ್, ಕಾರ್ಮಿಕ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳು ಪಾಲುದಾರಿಕೆ ಇಲಾಖೆಗಳಾಗಿದ್ದು, ಈ ನಿಟ್ಟಿನಲ್ಲಿ ತಕ್ಷಣವೇ ಕಾರ್ಯಚರಣೆಯನ್ನು ಕೈಗೊಂಡು ಅಪಘಾತಕ್ಕೀಡಾಗುವ ಪ್ರಕರಣಗಳು ಹೆಚ್ಚಾಗಿರುವುದನ್ನು ಗಮನಿಸಿ ಇಂತಹ ಅಪಾಯಕಾರಿ ಹಾಗೂ ಅಸುರಕ್ಷಿತವಾದ ಜನರ ಪ್ರಯಾಣವನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಶಾಲಾ ಆಡಳಿತ ಮಂಡಳಿ/ಮುಖ್ಯಸ್ಥರುಗಳಿಗೆ ಶಾಲಾ ಸುರಕ್ಷತೆ ಮತ್ತು ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಸರಕು ಸಾಗಾಣಿಕೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಮೋಟಾರು ವಾಹನ ಕಾಯಿದೆ/ನಿಯಮಗಳನ್ನು ಉಲ್ಲಂಘಿಸಿ ಸುರಕ್ಷಿತವಲ್ಲದ ರೀತಿಯಲ್ಲಿ ತರದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.



