alex Certify BIGG NEWS : `ಜನತಾ ದರ್ಶನ’ದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ : ಸಚಿವ ಬಿ.ನಾಗೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಜನತಾ ದರ್ಶನ’ದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ : ಸಚಿವ ಬಿ.ನಾಗೇಂದ್ರ

ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕರೆ ನೀಡಿದರು.

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಇಂದು ಏರ್ಪಡಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿ ಸ್ಥಳದಲ್ಲಿಯೇ ಪರಿಹಾರ ನೀಡುವ “ಜನತಾ ದರ್ಶನ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ರಾಜ್ಯ ಸರ್ಕಾರದ ಆಡಳಿತ ಯಂತ್ರ ಚುರುಕುಗೊಳಿಸಲು, ಮುಖ್ಯ ಮಂತ್ರಿಗಳ ನಿರ್ದೇಶನದಂತೆ ಪ್ರತಿ ತಿಂಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಬೇಕು ಎಂದು ರಾಜ್ಯ ಸರ್ಕಾರ ಈ ವಿಶೇಷ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆ ಅಥವಾ ಅಹವಾಲುಗಳಿದ್ದಲ್ಲಿ ಪ್ರತಿ ತಿಂಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೇರವಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ಅವರು ಇತ್ಯರ್ಥ ಪಡಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡುತ್ತಾರೆ. ವಿಳಂಬವಾದರೆ ಹಿಂಬರಹ ನೀಡಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದರು.

ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‍ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಅರ್ಜಿಗಳನ್ನು ಅಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಕಚೇರಿಗೆ ತಲುಪಿಸಲಾಗುತ್ತದೆ. ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವರು ಎಂದು ಹೇಳಿದರು.

ಇಂದಿನ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಹವಾಲು ಸಲ್ಲಿಸಲು ಕಂದಾಯ ಇಲಾಖೆ, ನೊಂದಣಿ ಮುದ್ರಾಂಕ ಇಲಾಖೆ, ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಗಣಿ ಮತ್ತು ಭೂ ವಿಜ್ಞಾನ, ಪೆÇಲೀಸ್ ಇಲಾಖೆ, ಅಗ್ನಿ ಶಾಮಕ, ಅಬಕಾರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗ, ಬಳ್ಳಾರಿ ಮಹಾನಗರ ಪಾಲಿಕೆ, ನಗರ ನೀರು ಸರಬರಾಜು ಮತ್ತು ನೈರ್ಮಲ್ಯ, ಕರ್ನಾಟಕ ಗೃಹ ಮಂಡಳಿ, ಶಿಕ್ಷಣ ಇಲಾಖೆ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಅಕ್ಷರ ದಾಸೋಹ, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕೈಮಗ್ಗ ಮತ್ತು ಜವಳಿ ಸೇರಿದಂತೆ ಹಲವು ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಲು 15 ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.

ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಮಳಿಗೆಗಳನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಕುಡಿಯುವ ನೀರಿನ ವ್ಯವಸ್ಥೆ, ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಅಗ್ನಿ ಶಾಮಕ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು.

ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಜನರು ತಮ್ಮ ಅಹವಾಲು ಸಲ್ಲಿಸಲು ಆಗಮಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಉತ್ಸುಕರಾಗಿಯೇ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ ಪರಿಹಾರ ನೀಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...