BIGG NEWS : `ಕರ್ನಾಟಕ ಬಂದ್’ ಗೆ `ಕರವೇ’ ಬೆಂಬಲ ಇಲ್ಲ : ಕರವೇ ಅಧ್ಯಕ್ಷ ನಾರಾಯಣಗೌಡ ಸ್ಪಷ್ಟನೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ನನ್ನ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಕಾವೇರಿ ಸಮಸ್ಯೆಯನ್ನು ಅವರು ಬಗೆಹರಿಸಿ ರೈತರ ಹಿತ ಕಾಪಾಡಲಿದ್ದಾರೆ. ಹೀಗಾಗಿ ಬೆಂಗಳೂರು ಬಂದ್ ಹಾಗೂ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.

ಬಂದ್ ಮಾಡುವುದರಿಂದ ಸಮಸ್ಯೆಗೆ ಪರಿಹಾರವಲ್ಲ. ನಾನು ಕರ್ನಾಟಕದ ನೆಲ, ಜಲ ಭಾಷೆಯ ವಿಚಾರವಾಗಿ ಹೋರಾಟ ಮುಂದುವರೆಯುತ್ತದೆ. ಬಂದ್ ಮಾಡುವುದರಿಂದ ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read