alex Certify BIGG NEWS : `ಕರ್ನಾಟಕ ಬಂದ್’ ಗೆ `ಕರವೇ’ ಬೆಂಬಲ ಇಲ್ಲ : ಕರವೇ ಅಧ್ಯಕ್ಷ ನಾರಾಯಣಗೌಡ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಕರ್ನಾಟಕ ಬಂದ್’ ಗೆ `ಕರವೇ’ ಬೆಂಬಲ ಇಲ್ಲ : ಕರವೇ ಅಧ್ಯಕ್ಷ ನಾರಾಯಣಗೌಡ ಸ್ಪಷ್ಟನೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ನನ್ನ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಕಾವೇರಿ ಸಮಸ್ಯೆಯನ್ನು ಅವರು ಬಗೆಹರಿಸಿ ರೈತರ ಹಿತ ಕಾಪಾಡಲಿದ್ದಾರೆ. ಹೀಗಾಗಿ ಬೆಂಗಳೂರು ಬಂದ್ ಹಾಗೂ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.

ಬಂದ್ ಮಾಡುವುದರಿಂದ ಸಮಸ್ಯೆಗೆ ಪರಿಹಾರವಲ್ಲ. ನಾನು ಕರ್ನಾಟಕದ ನೆಲ, ಜಲ ಭಾಷೆಯ ವಿಚಾರವಾಗಿ ಹೋರಾಟ ಮುಂದುವರೆಯುತ್ತದೆ. ಬಂದ್ ಮಾಡುವುದರಿಂದ ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...