alex Certify BIGG NEWS : `ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು `KEA’ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು `KEA’ ಅನುಮತಿ

ಬೆಂಗಳೂರು : ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಹಾಜರಾಗುವ ವಿಚಾರ ಭಾರೀ ಸಂಘರ್ಷಕ್ಕೆ ಕಾರಣವಾಗಿತ್ತು. ಇದೀಗ ಕೆಇಎ ವಿವಿಧ ನಿಗಮ ಮಂಡಳಿಗಳ ಹುದ್ದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಇ ಹಾಜರಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು  ಕೆಇಎ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್ ಪೋರ್ಟ್  ಅಳತೆಯ 2 ಫೋಟೋ, ಸರ್ಕಾರದ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...