alex Certify BIGG NEWS : ಇಂದಿನಿಂದ ‘KEA’ ಮರು ಪರೀಕ್ಷೆ: `ಹಿಜಾಬ್’ ಜೊತೆ ತಾಳಿ, ಕಾಲುಂಗುರಕ್ಕೂ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಂದಿನಿಂದ ‘KEA’ ಮರು ಪರೀಕ್ಷೆ: `ಹಿಜಾಬ್’ ಜೊತೆ ತಾಳಿ, ಕಾಲುಂಗುರಕ್ಕೂ ಅವಕಾಶ

ಬೆಂಗಳೂರು : ನವೆಂಬರ್ 18 ಮತ್ತು 19 ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಹಿಂದಿನಂತೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಕೆಇಎ ಕಾರ್ಯನಿರ್ವಾಹ ನಿರ್ದೇಶಕಿ ಎಸ್. ರಮ್ಯಾ ಅವರು, ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಪರೀಕ್ಷೆಗಳಿಗೆ ಈ ಹಿಂದಿನಂತೆ ಹಿಜಾಬ್ ಮುಂದುವರೆಯಲಿದೆ. ಆದರೆ ಎಲ್ಲಾ ಅಭ್ಯರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವ ಮೊದಲು ನಿಗದಿತ ಸಮಯಕ್ಕಿಂತ ಎರಡು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಿರಬೇಕು ಎಂದು ಹೇಳಿದ್ದಾರೆ.

ಇನ್ನೂ ಹಿಂದೂ ಅಭ್ಯರ್ಥಿಗಳು ಪರೀಕ್ಷೆ ಬರೆಯುವಾಗ ಕೊಠಡಿಯಲ್ಲಿ ಮಾಂಗಲ್ಯ, ಕಾಲುಂಗರ ಧರಿಸಬಹುದು. ಆದರೆ ಬೇರೆ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದು ಹೇಳಿದ್ದಾರೆ.

ಈ ನಿಯಮ ಪಾಲನೆ ಕಡ್ಡಾಯ

1) ಅಭ್ಯರ್ಥಿಗಳು ಜೇಬು ಇಲ್ಲದ ಅಥವಾ ಕಡಿಮೆ ಜೇಬು ಇರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.
2) ಕುರ್ತಾ, ಜೀನ್ಸ್, ಪೈಜಾಮು ಧರಿಸಲು ಅವಕಾಶ ಇಲ್ಲ
3) ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಹಾಫ್ ಶರ್ಟ್ ಧರಿಸಬೇಕು, ಫುಲ್ ಕೈ ಶರ್ಟ್ ಧರಿಸುವಂತಿಲ್ಲ.
4) ಅಭ್ಯರ್ಥಿಗಳು ಶೂ ಧರಿಸುವ ಹಾಗಿಲ್ಲ, ಚಪ್ಪಲಿಗಳನ್ನು ಧರಿಸಬೇಕು.
5) ಧರಿಸುವ ಬಟ್ಟೆಗಳಲ್ಲಿ ಜಿಪ್ ಪಾಕೆಟ್ ಗಳು, ದೊಡ್ಡ ಬಟನ್ ಇರಬಾರದು
6) ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವ ಹಾಗಿಲ್ಲ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವ ಹಾಗಿಲ್ಲ.
7) ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕಡ್ಡಾಯ.
8) ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವಂತಿಲ್ಲ.
9) ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಆಭರಣ ಧರಿಸುವ ಹಾಗಿಲ್ಲ. ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...