ಹುಬ್ಬಳ್ಳಿ : ರಾಷ್ಟ್ರ, ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಹೇಳಿದ್ದಾರೆ.
ಯುಗಾದಿಯ ನಂತರ ರಾಷ್ಟ್ರ ರಾಜಕಾರಣ, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದ್ದು, ಯುಗಾದಿವರೆಗೂ ಸಮಯ ಇದೆ. ನಂತರ ರಾಜಕೀಯ ಅಸ್ಥಿರತೆ ಉಂಟಾಗಿಲಿದೆ. ಮನುಷ್ಯ ಮಾಡಿದ ತಪ್ಪುಗಳನ್ನು ದೇವರು ಕ್ಷಮಿಸುತ್ತಾನೆ. ಆದರೆ ಮನುಷ್ಯ ಮಾಡಿದ ಪಾಪಕರ್ಮಗಳು ಮನುಷ್ಯನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಮನುಷ್ಯನ ಕರ್ಮ ಭಾದೆಗಳು ಹೆಚ್ಚಾದಾಗ ಬರಗಾಲ,ರೋಗದಂತಹ ದುಸ್ಥಿತಿಗಳನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ. ಶ್ರಾವಣ ಮಾಸದ ಮಧ್ಯಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭವಿಷ್ಯವಾಣಿ ನುಡಿದಿದ್ದಾರೆ.