ಬೆಂಗಳೂರು : ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡುವ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮದರಸಾಗಳ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಭಾಷಾ ವಿಷಯಗಳ ಬೋಧನೆಯ ಜೊತೆಗೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯದ ಶಾಲೆಗಳಂತೆ ಮದರಸಾಗಳಲ್ಲೂ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ವಿಷಯಗಳ ಬೋಧನೆ ಜೊತೆಗೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ವಕ್ಫ್ ಬೋರ್ಡ್ ನಲ್ಲಿ ನೋಮದಾಯಿತರಾಗಿರುವ 1265 ಮದರಸಾಗಳ ಪೈಕಿ 100 ಮದರಸಾಗಳ 5,000 ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕ ಕಲಿಕೆ ಆರಂಭಿಸಿ ಮುಂದಿನ ವರ್ಷದಿಂದ ಎಲ್ಲಾ ಮದರಸಾಗಳಲ್ಲಿ ಕನ್ನಡ ಕಡ್ಡಾಯ ಕಲಿಕೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.