ಬೆಂಗಳೂರು : ಸಮಾಜದಲ್ಲಿ ಕಡೆಗಣನೆಗೆ ಒಳಗಾದ ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಶೀಘ್ರವೇ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು, ಆರ್ಥಿಕ ಸ್ವಾವಲಂಬನೆ ಸಾಧಿಸಲು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತ ಬದುಕು ಕಟ್ಟಿಕೊಳ್ಳಲು ನೆರವಾಗಲು ಲಿಂಗತ್ವ ಅಲ್ಪಸಂಖ್ಯಾತ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸ್ವಯಂ ಉದ್ಯೋಗ ಕೈಗೊಳ್ಳಲು, ಬದುಕು ಕಟ್ಟಿಕೊಳ್ಳಲು, ಆರ್ಥಿಕ ಸಬಲತೆ ಸಾಧಿಸಲು ಈಗ ನೀಡುತ್ತಿರುವ 50 ಸಾವಿರ ರೂ. ನೆರವನ್ನು 1 ಲಕ್ಷ ರೂ.ಗೆ ಹೆಚ್ಚಿಸಲಾಗುವುದು. ಶೇ. 50 ರಷ್ಟು ಸಬ್ಸಿಡಿ ಬಿಟ್ಟು ಉಳಿದ 50 ರಷ್ಟು ಹಣಹಣ ಮರುಪಾವತಿಸುವುದನ್ನೂ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ.