BIGG NEWS : `ಹೊಂದಾಣಿಕೆ ರಾಜಕಾರಣ’ದ ಬಗ್ಗೆ ಶಾಸಕ ಯತ್ನಾಳ್ ಹೊಸ ಬಾಂಬ್!

ವಿಜಯಪುರ : ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಎಲ್ಲೆಲ್ಲಿ ಹೊಂದಾಣಿಕೆ ಆಗಿದೆ ಎಂದು ನಮ್ಮ ಹೈಕಮಾಂಡ್ ಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಎಲ್ಲೆಲ್ಲಿ ಹೊಂದಾಣಿಕೆ ಆಗಿದೆ ಎಂದು ನಮ್ಮ ಹೈಕಮಾಂಡ್​​ಗೆ ಗೊತ್ತಾಗಿದೆ. ಯಾರ ಜೊತೆ ಹೊಂದಾಣಿಕೆ ಮಾಡಿದ್ದಾರೆಂದು ವರಿಷ್ಠರಿಗೆ ಗೊತ್ತಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ನೇಮಕ ಮಾಡುತ್ತಿದ್ದಾರೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣದಿಂದ ಪ್ರಧಾನಿ ನರೇಂದ್ರ ಮೋದಿಗೆ ಬೇಸರವಿದೆ . ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read