
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,ಕಾರ್ಯಕರ್ತ ಹಾಗು ನಾಡಿನ ಮತದಾರರೇ. ನಾವು ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥವಾಗಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮ “Adjustment” ರಾಜಕೀಯ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹಾಗು ಸರ್ಕಾರದ ವೈಫಲ್ಯದ ಕುರಿತು ನಮ್ಮ ಎಲ್ಲಾ ಶಾಸಕ ಮಿತ್ರರು ಸಮರ್ಥವಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಇನ್ನು ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಹಾಗು ಆಯವ್ಯಯದ ಕುರಿತು ಚರ್ಚೆಗಳು ಬಾಕಿ ಇದೆ ಎಂದು ಹೇಳಿದ್ದಾರೆ.