ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ನಂದಿನಿ ಹಾಲು, ಮೊಸರಿನ ದರ ಹೆಚ್ಚಳವಾಗಲಿದೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.
ನಂದಿನಿ ಹಾಲಿನಿ ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಪ್ರಶ್ನೆಗೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದರು. ಇತರ ಖಾಸಗಿ ಬ್ರ್ಯಾಂಡ್ ಗಳ ದರ 10-12 ರೂ ಕಡಿಮೆಯಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಳ ಮಾಡುವುದಾಗಿ ಅವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ಚಿಂತನೆ ನಡೆಸಿದ್ದು, ಸರ್ಕಾರ ಕೂಡ ಒಪ್ಪಿಗೆ ನೀಡಿದೆ, ಆದರೆ ಎಷ್ಟು ಏರಿಕೆಯಾಗುತ್ತದೆ ಎಂಬುದನ್ನು ಸರ್ಕಾರ ಸದ್ಯದಲ್ಲೇ ತಿಳಿಸಲಿದೆ.
ಹೊಸ ವರ್ಷಕ್ಕೆ ಜನರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಮುಂದಿನ ವರ್ಷ ಅಂದರೆ ಜನವರಿ 2024 ರಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಜನವರಿ ಅಥವಾ ಫೆಬ್ರವರಿಯಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.