ನವದೆಹಲಿ : ವರ್ಷಕ್ಕೆ ಎರಡು ಬಾರಿ ನೀಟ್ ಪರೀಕ್ಷೆ ನಡೆಸುವ ಯಾವುದೇ ಪ್ರಸ್ತಾಪವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ತಳ್ಳಿಹಾಕಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಸಚಿವ ಸುಭಾಷ್ ಸರ್ಕಾರ್ ಹೇಳಿದ್ದಾರೆ.
ಲೋಕಸಭೆಯಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಗಲ್ಲಾ ಜಯದೇವ್ ಅವರು ಕೇಳಿದ ಪ್ರಶ್ನೆಗೆ ಶಿಕ್ಷಣ ರಾಜ್ಯ ಸಚಿವ ಸುಭಾಷ್ ಸರ್ಕಾರ್ ಉತ್ತರಿಸುತ್ತಿದ್ದರು. ಕಳೆದ 10 ವರ್ಷಗಳಲ್ಲಿ ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
2014ರಲ್ಲಿ 6,58,040 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. 2023ರಲ್ಲಿ 20,38,597 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ವರ್ಷಕ್ಕೆ ಎರಡು ಬಾರಿ ನೀಟ್ ಪರೀಕ್ಷೆ ನಡೆಸುವ ಪ್ರಸ್ತಾಪ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.