
ಶಿವಮೊಗ್ಗ : ಮಕ್ಕಳಿಗೆ ತೊಂದರೆಯಾಗದಂತೆ ರಾಜ್ಯದಲ್ಲಿ ಹಂತ ಹಂತವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತೆಗೆದು ರಾಜ್ಯ ಶಿಕ್ಷಣ ನೀತಿಯನ್ನು ಅಳವಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆಯೂ ಎನ್ ಇಪಿ ಜಾರಿಯಾಗಿಲ್ಲ. ಎಲ್ಲೆಲ್ಲಿ ಜಾರಿಯಾಗಿದೆ ಅಲ್ಲಿ ಹಂತ-ಹಂತವಾಗಿ ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ತೆಗೆಯುತ್ತೇವೆ.ಎನ್‌ಇಪಿಯಿಂದ ಕೆಲ ಅನಗತ್ಯ ವಿಚಾರಗಳು ಸೇರಿಸಲಾಗಿದೆ. ಅವುಗಳನ್ನು ಬದಲಿಸಲೇ ಬೇಕಾದ ಅನಿವಾರ್ಯತೆ ಇದೆ ಎಂದರು.
ರಾಜ್ಯದಲ್ಲಿ 15 ಕ್ಕಿಂತ ಕಡಿಮೆ ಮಕ್ಕಳು ಇರುವ ಸುಮಾರು 22 ಸಾವಿರ ಶಾಲಗಳಿವೆ. ಕಡಿಮೆ ಮಕ್ಕಳಿರುವ ಶಾಲೆಗಳನ್ನು ಉತ್ತಮ ಶಾಲೆಗಳೊಂದಿಗೆ ಸೇರಿಸಲಾಗುತ್ತದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.