ನವದೆಹಲಿ : ಬಾಲಸೋರ್ ರೈಲು ಅಪಘಾತ ಪ್ರಕರಣದ ಮೂವರು ಆರೋಪಿಗಳ ಕಸ್ಟಡಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.
ಮೂವರು ಆರೋಪಿಗಳಾದ ಹಿರಿಯ ಸೆಕ್ಷನ್ ಎಂಜಿನಿಯರ್ (ಸಿಗ್ನಲ್) ಅರುಣ್ ಕುಮಾರ್ ಮಹಾಂತ, ಸೆಕ್ಷನ್ ಎಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಅವರ ಕಸ್ಟಡಿಯನ್ನು ವಿಸ್ತರಿಸಲಾಗಿದೆ. ಈ ಮೂವರಲ್ಲಿ ಇಬ್ಬರು ಆರೋಪಿಗಳಾದ ಅರುಣ್ ಕುಮಾರ್ ಮಹಾಂತ ಮತ್ತು ಮೊಹಮ್ಮದ್ ಅಮೀರ್ ಖಾನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಮೂವರು ಆರೋಪಿಗಳನ್ನು 4 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ವಿಶೇಷ ನ್ಯಾಯಾಲಯ ಸಿಬಿಐಗೆ ಅನುಮತಿ ನೀಡಿತು. ಎರಡನೇ ಹಂತದ ರಿಮಾಂಡ್ ಸಮಯದಲ್ಲಿ ತನಿಖೆಯನ್ನು ತೀವ್ರಗೊಳಿಸಲು ತನಿಖಾ ಸಂಸ್ಥೆ ಎಲ್ಲಾ ಆರೋಪಿಗಳನ್ನು ವಿಚಾರಣೆ ನಡೆಸಲಿದೆ” ಎಂದು ಸಿಬಿಐ ವಕೀಲರು ತಿಳಸಿದ್ದಾರೆ.
ಏತನ್ಮಧ್ಯೆ, 280 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಬಹನಾಗ ರೈಲು ಕ್ರೇಸ್ ಗೆ ಸಂಬಂಧಿಸಿದಂತೆ ಸಿಬಿಐ ರೈಲ್ವೆಯ ಇನ್ನೂ ಇಬ್ಬರು ತಾಂತ್ರಿಕ ಹಿರಿಯ ಅಧಿಕಾರಿಗಳನ್ನು ಕರೆಸಿ ವಿಚಾರಣೆ ನಡೆಸಿತ್ತು. ಸಿಬಿಐ ತಂಡವು ಭುವನೇಶ್ವರದ ಚಂದಕಾ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ವಿಚಾರಣೆ ನಡೆಸಿದೆ ಎಂದು ವರದಿಯಾಗಿದೆ.
ವಿಶೇಷವೆಂದರೆ, ರೈಲ್ವೆ ಸುರಕ್ಷತಾ ಆಯುಕ್ತರ (ಸಿಆರ್ಎಸ್) ತನಿಖಾ ವರದಿಯು ಸಿಗ್ನಲಿಂಗ್ ಸರ್ಕ್ಯೂಟ್ ಬದಲಾವಣೆಯಲ್ಲಿನ ಲೋಪಗಳಿಂದಾಗಿ ಬಹನಾಗ ನಿಲ್ದಾಣದಲ್ಲಿ ಮಾರಣಾಂತಿಕ ರೈಲು ಅಪಘಾತ ಸಂಭವಿಸಿದೆ ಎಂದು ಹೇಳಿದೆ.