ಚಿಕ್ಕಮಗಳೂರು : ರಾಜ್ಯದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಪ್ರತಿ ಮೂರು ಗ್ರಾಮ ಪಂಚಾಯ್ತಿಗೊಂದು ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಯೋಜನೆ ಹಮ್ಮಿಕೊಂಡಿರುವುದನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ, ಮುಂದಿನ ವರ್ಷ 600 ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು, 2025 ರೊಳಗೆ ರಾಜ್ಯದಲ್ಲಿ ಸುಮಾರು 2,000 ಕೆಪಿಎಸ್ ಶಾಲೆಗಳು ಕಾರ್ಯಾರಂಭಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಪ್ರತಿ ಮೂರು ಗ್ರಾಮಗಳಿಗೆ ತಲಾ ಒಂದರಂತೆ ರಾಜ್ಯದ ಸುಮಾರು 150 ಶಾಸಕರಿಗೆ ತಲಾ ಮೂರು ಕೆಪಿಎಸ್ ಶಾಲೆಗಳನ್ನು ನೀಡಲಾಗುತ್ತಿದೆ. ಕೆಪಿಎಸ್ ಶಾಲೆಯಲ್ಲಿ ಎಲ್ ಕೆಜಿ, ಯುಕೆಜಿಯಿಂದ 12 ನೇ ತರಗತಿವರೆಗೆ ಶಾಲಾ ಕಾಲೇಜುಗಳನ್ನು ಒಂದೇ ಆವರಣದಲ್ಲಿ ಆರಂಭಿಸಲಾಗುವುದು, ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮದಲ್ಲೂ ಶಾಲೆ ಇರಲಿದೆ ಎಂದು ತಿಳಿಸಿದ್ದಾರೆ.