ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇದನ್ನು ಸಂಸತ್ತಿನಲ್ಲಿ ಇಂದು ಮಂಡಿಸಲಾಗುತ್ತಿದೆ.
ವಿರೋಧ ಪಕ್ಷಗಳಿಂದ ನಿರಂತರ ಬೇಡಿಕೆ ಇತ್ತು. ಈ ಮಸೂದೆ ಕಳೆದ 27 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಕಾಂಗ್ರೆಸ್ ಕೂಡ ಈ ಮಸೂದೆಯನ್ನು ಅಂಗೀಕರಿಸಬೇಕೆಂದು ನಿರಂತರವಾಗಿ ಒತ್ತಾಯಿಸುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಮೋದಿ ಸರ್ಕಾರ ಸದನದಲ್ಲಿ ಅಂಗೀಕರಿಸಲು ಮುಂದಾಗಿದೆ.
ಮಹಿಳೆಯರಿಗೆ ಶಾಸಕಾಂಗ ಮೀಸಲಾತಿ ಒದಗಿಸುವ ಮಸೂದೆಯನ್ನು ಅಂಗೀಕರಿಸಲು ಕಾಂಗ್ರೆಸ್ ಬೇಷರತ್ತಾದ ಬೆಂಬಲವನ್ನು ನೀಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಮ್ಮ ಪ್ರಧಾನಿ ಅವರು ಮಹಿಳಾ ಸಬಲೀಕರಣಕ್ಕಾಗಿ ಹೋರಾಡುವೇ ಎಂದು ಹೇಳುತ್ತಾರೆ? ಅವರ ಪಕ್ಷ ಮೇಲೆ ಬರಲು ಮಹಿಳೆಯರೇ ಕಾರಣ, ಇದೀಗ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಮೂಲಕ ಅವರಿಗೆ ಸೇವೆ ಸಲ್ಲಿಸಲು ಒಂದು ಸಮಯ ಬಂದಿದೆ ಎಂದು ಹೇಳಿದ್ದಾರೆ.