ಬೆಂಗಳೂರು : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ರಾಜೀವ್ ಗಾಂಧಿ ಯುವಶಕ್ತಿ ಕೇಂದ್ರವನ್ನುಪುನರಾರಂಭಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರವನ್ನು ಪ್ರತಿ ಗ್ರಾಮಪಂಚಾಯಿತಿಯಲ್ಲಿ ಸ್ಥಾಪನೆ ಮಾಡಿಸಿದ್ದೆ. ಬೇರೆ ಸರ್ಕಾರಗಳು ಈ ಯೋಜನೆ ಮುಂದುವರೆಸಲಿಲ್ಲ.ಈಗ ಈ ಕೇಂದ್ರಗಳನ್ನು ಪುನಾರಂಭಿಸಿ ಯುವಶಕ್ತಿಯನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.