
ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭ್ರಷ್ಟಾಚಾರದ ಹಣವನ್ನು ದೆಹಲಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಜೆಸಿಬಿಯಲ್ಲಿ ಹಣ ತುಂಬಿಸುತ್ತಿತ್ತು ಎಂದು ಆರೋಪ ಮಾಡುತ್ತಿದ್ದೇವು ಆದ್ರೆ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಹಣವನ್ನು ಏರ್ ಲಿಫ್ಟ್ ಮಾಡುತ್ತಿದೆ. ಕಾಂಗ್ರೆಸ್ ನವರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.
ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ ನೀಡಬೇಕು. ವರ್ಗಾವಣೆಯಲ್ಲಿ 150 ಕೋಟಿ ರೂ. ಜಲಧಾರೆ ಯೋಜನೆಯಲ್ಲಿ 150 ಕೋಟಿ ರೂ. ಸೇರಿ 300 ಕೋಟಿ ರೂ.ಲೂಟಿ ಹೊಡೆದಿದ್ದಾರೆ. ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷಕ್ಕೆ ಏರ್ ಲಿಫ್ಟ್ ಮೂಲಕ ದೆಹಲಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.