alex Certify BIGG NEWS : 9 ನೇ ತರಗತಿಗೆ SA-2, 11 ನೇ ತರಗತಿಗೆ ವಾರ್ಷಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : 9 ನೇ ತರಗತಿಗೆ SA-2, 11 ನೇ ತರಗತಿಗೆ ವಾರ್ಷಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : 2023_24ನೇ_ಸಾಲಿನಿಂದ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ 2 ಪರೀಕ್ಷೆಯನ್ನು ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬೆಂಗಳೂರು, ಈಗಾಗಲೇ 10 ಮತ್ತು 12ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ಹಾಗೂ 5 ಮತ್ತು 8ನೇ ತರಗತಿಗಳಿಗೆ ಮೌಲ್ಯಾಂಕನವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುತ್ತಿದ್ದು, 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಮಂಡಲಿಯಿಂದಲೇ ನಡೆಸಿದ್ದಲ್ಲಿ ಎಲ್ಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲಿಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಬಲವರ್ಧನೆಗೊಳಿಸಬಹುದು ಎಂದು ಅಭಿಪ್ರಾಯಿಸಿರುತ್ತಾರೆ.

1966 ರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾಯಿದೆ ಮತ್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ತಿದ್ದುಪಡಿ ಅಧಿನಿಯಮ 2022 ರ ನಿಯಮ 15 (A) (IV) ರಲ್ಲಿ Any other Examination which the State Government may from time to time by motification specify: ಎಂದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳ ಜೊತೆಗೆ ಇತರ ಪರೀಕ್ಷೆಗಳನ್ನು ನಡೆಸಲು ಸರ್ಕಾರಿ ಆದೇಶವನ್ನು ಹೊರಡಿಸಬೇಕಿರುತ್ತದೆ. ಈ ಸಂಬಂಧ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸುವ ಕುರಿತು ಪರಿಶೀಲಿಸಿ. ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...