ಬೆಂಗಳೂರು : ಶೀಘ್ರವೇ ಸದಾಶಿವ ಆಯೋಗ ವರದಿ ಜಾರಿ ಮಾಡಲಾಗುವುದು. ವರದಿ ಜಾರಿಗೆ ನಾವು ಬದ್ಧರಾಗಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾಶಿವ ಆಯೋಗ ವರದಿ ಜಾರಿಗೆ ನಾವು ಬದ್ಧರಾಗಿದ್ದೇವೆ. ಬಿಜೆಪಿಯವರು ಈ ಹಿಂದೆ ಶೇ.2ರಂತೆ ಹಂಚಿಕೆ ಮಾಡಿದ್ದಾರೆ. ಆದರೆ ಅವರ ಪಕ್ಷದ ಕೇಂದ್ರ ಮಂತ್ರಿ ನಾರಾಯಣಸ್ವಾಮಿಯೇ ಇದು ಸಾಧ್ಯವಿಲ್ಲ ಅಂತ ಹೇಳಿದ್ದಾರೆ. ಹೀಗಾಗಿ ನಾವು ಕುಳಿತು ಚರ್ಚೆ ಮಾಡುತ್ತೇನೆ. ಯಾರ್ ಯಾರಿಗೆ ಎಷ್ಟೆಷ್ಟು ಮೀಸಲಾತಿ ಹಂಚಿಕೆ ಅಂತ ತೀರ್ಮಾನ ಮಾಡುತ್ತೇವೆ ಎಂದರು.
ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗಾವಣೆ ಒಂದು ವಾರದೊಳಗೆ ಅಂತಿಮ ಮಾಡುತ್ತೇವೆ. ಬಹುಶಃ ಇನ್ನೊಂದು ವಾರದಲ್ಲಿ ಪೊಲೀಸ್ ಇಲಾಖೆ ವರ್ಗಾವಣೆ ಪೂರ್ಣವಾಗಲಿದೆ. ವರ್ಗಾವಣೆಗೆ ಶಾಸಕರ ಶಿಫಾರಸು ಪತ್ರ ಒಂದು ಹಂತ. ಶಾಸಕರ ಶಿಫಾರಸು ಪತ್ರದ ಜತೆ ಪರಿಶೀಲನೆಯನ್ನೂ ಮಾಡಿ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದರು.