
ಚೆನ್ನೈ : ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಭಾರೀ ವಿವಾದ ಹುಟ್ಟುಹಾಕಿರುವ ಬೆನ್ನಲ್ಲೇ ಇದೀಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
ಸನಾತನ ಧರ್ಮದ ಹೇಳಿಕೆ ಬಗ್ಗೆ ನಾನೂ ಈಗಲೂ ಬದ್ಧನಾಗಿದ್ದೇನೆ. ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧ, ಸನಾತನ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದಾಗಿ ಮನುಷ್ಯರ ನಡುವಿನ ತಾರತಮ್ಯಕ್ಕೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ಅವರನ್ನು ಕರೆಯದಿರುವುದೇ ಇದಕ್ಕೆ ಉತ್ತಮ ಸಾಕ್ಷಿ ಎಂದು ಹೇಳಿದ್ದಾರೆ.