ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಯಾದಗಿರಿ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಜಿಲ್ಲೆಗಳಲ್ಲಿನ 10 ಕ್ಕೂ ಹೆಚ್ಚು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಾಲೆಗಳಿಗೆ ಜುಲೈ 22 ರ ಇಂದು ರಜೆ ಘೋಷಿಸಲಾಗಿದೆ. ಯಾದಗಿರಿಯಲ್ಲೂ ವರುಣಾರ್ಭಟ ಮುಂದುವರೆದಿದ್ದು, ಯಾದಗಿರಿ ಜಿಲ್ಲೆಯ ಹುಣಸಗಿ, ಸುರುಪುರ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆಮಾಡಲಾಗಿದೆ. ನಿನ್ನೆ ಯಾದಗಿರಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು