alex Certify BIGG NEWS : ಕಡಿಮೆ ಮಕ್ಕಳಿರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನ : ಶಿಕ್ಷಣ ಸಚಿವ ಮಧುಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕಡಿಮೆ ಮಕ್ಕಳಿರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಶಿವಮೊಗ್ಗ : ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧುಬಂಗಾರಪ್ಪ, ರಾಜ್ಯದಲ್ಲಿ 15 ಕ್ಕಿಂತ ಕಡಿಮೆ ಮಕ್ಕಳು ಇರುವ ಸುಮಾರು 22 ಸಾವಿರ ಶಾಲಗಳಿವೆ. ಕಡಿಮೆ ಮಕ್ಕಳಿರುವ ಶಾಲೆಗಳನ್ನು ಉತ್ತಮ ಶಾಲೆಗಳೊಂದಿಗೆ ಸೇರಿಸಲಾಗುತ್ತದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಲ್ಲೆಲ್ಲಿ ಎನ್ ಇಪಿ ಜಾರಿಯಾಗಿದೆಯೋ ಅಲ್ಲೆಲ್ಲ ಹಂತ ಹಂತವಾಗಿ ಮಕ್ಕಳಿಗೆ ತೊಂದರೆಯಾಗಿದೆ. ಅದರ ಬದಲಾಗಿ ಜನರ ಅಪಕ್ಷೇಯಂತೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಬರಪೀಡಿತ ಪ್ರದೇಶಗಳ ಘೋಷಣೆಗೆ ಕೇಂದ್ರದ ಮಾರ್ಗಸೂಚಿಗಳು ಬಹಳಷ್ಟು ಬಿಗಿಯಾಗಿದ್ದು, ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಇದೆ. ಇದರ ಬಗ್ಗೆ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...