ಹಾಸನ : ಮುಂದಿನ ವರ್ಷದಿಂದ ಎನ್‌ಇಪಿ ರದ್ದುಪಡಿಸಿ, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುವುದಾಗಿ ಬಜೆಟ್‌ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅದರಂತೆ ಮುಂದಿನ ವರ್ಷದಿಂದ ಎನ್‌ಇಪಿ ರದ್ದುಪಡಿಸಿ, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಹೇಳಿದರು.
ರಾಜ್ಯದ ಹಲವು ಕಡೆಗಳಲ್ಲಿ ಎನ್‌ಇಪಿ ಜಾರಿ ನಂತರ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಅನೇಕ ಕಡೆಗಳಲ್ಲಿ ಮೂಲಸೌಕರ್ಯ ಇಲ್ಲದ ಕಾರಣ ರಾಜ್ಯದಲ್ಲಿ ಎನ್‌ಇಪಿಗೆ ಪೂರಕ ವಾತಾವರಣ ಇಲ್ಲ, ಹೀಗಾಗಿ ಸಾಕಷ್ಟು ನ್ಯೂನತೆ ಇರುವುದರಿಂದ ಎನ್ ಇಪಿ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದರು.