
ಬೆಂಗಳೂರು: ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನೇಮಿಸಿ ಆದೇಶಿಸಿದೆ.
ಇತ್ತೀಚೆಗಷ್ಟೇ ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣ) (ತಿದ್ದುಪಡಿ) ವಿಧೇಯಕ ಮಂಡಿಸಿ ಅನುಮೋದನೆ ಪಡೆದಿದ್ದ ಸರಕಾರ, ಈಗ ಪೊನ್ನಣ್ಣ ಅವರನ್ನು ಸಿಎಂ ಕಾನೂನು ಸಲಹೆಗಾರರ ಹುದ್ದೆಗೆ ನೇಮಿಸಿ ಅಧಿಕೃತ ಆದೇಶ ಹೊರಡಿಸಿದ್ದು, ಸಂಪುಟ ದರ್ಜೆ ಸ್ಥಾನಮಾನವನ್ನೂ ನೀಡಿದೆ.
