ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಖಾಸಗಿ ಕೋಟಾದ ಸೀಟುಗಳಿಗೆ ಶೇ. 10 ರಷ್ಟು ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರ ಹಾಗೂ ಖಾಸಗಿ ಕಾಲೇಜುಗಳ ನಡುವೆ ಶುಲ್ಕ ಒಪ್ಪಂದವಾಗಿದ್ದು, ರಾಜ್ಯ ಸರ್ಕಾರ ವೈದ್ಯಕೀಯ ಕೋರ್ಸ್ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
2023-24ನೇ ಸಾಲಿನ ಸ್ನಾತಕ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಸೀಟು ಹಂಚಿಕೆ & ಶುಲ್ಕ ನಿಗಧಿಗೆ ಸಂಬಂಧಿಸಿದಂತ ಸರ್ಕಾರವು ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ(KRLMPCA)ಸಂಸ್ಥೆಗಳೊಂದಿಗೆ ಪರಸ್ಪರ ಒಪ್ಪಂದದ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕಾಗಿದೆ.
2023-24ನೇ ಸಾಲಿನ ಸ್ನಾತಕ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ:17-07-2023ರಂದು ನಡೆದ ಸಭೆಯಲ್ಲಿ, ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳು ಶುಲ್ಕ ಹೆಚ್ಚಳ ಹಾಗೂ ಇನ್ನಿತರ ಕೆಲವು ಬೇಡಿಕೆಗಳನ್ನು ಸಲ್ಲಿಸಲಾಗಿದೆ.
ಸರ್ಕಾರಿ/ಅನುದಾನರಹಿತ ಖಾಸಗಿ ವೈದ್ಯಕೀಯ/ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಎಲ್ಲಾ ಸ್ನಾತಕ ಕೋರ್ಸಿನ ಸೀಟುಗಳಿಗೂ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳು/ಡೀಮ್ ವಿಶ್ವವಿದ್ಯಾಲಯಗಳು ಸಂಬಂಧಿತ ಕಾಯ್ದೆಗಳು/ಮುಚ್ಚಳಿಕೆ ಮತ್ತು ಒಪ್ಪಂದ ಪತ್ರಗಳನ್ವಯ ಸರ್ಕಾರಕ್ಕೆ ಬಿಟ್ಟುಕೊಡುವ ಸೀಟುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ 2023-24ನೇ ಸಾಲಿಗೆ ಕೌನ್ಸಿಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲು ನಿರ್ಣಯಿಸಲಾಯಿತು.
ಅದರಂತ ರಾಜ್ಯದಲ್ಲಿನ ಖಾಸಗಿ ವೈದ್ಯಕೀಯ/ದಂತ ವೈದ್ಯಕೀಯ ಕಾಲೇಜುಗಳಲ್ಲಿನ (KPCF/KRLMPCA/AMPCK) a (ಎಂಬಿಬಿಎಸ್)/ದಂತ ವೈದ್ಯಕೀಯ(ಬಿಡಿಎಸ್) ಸೀಟುಗಳಿಗೆ ಪಾವತಿಸಬೇಕಾದ ಶುಲ್ಕವನ್ನು ಖಾಸಗಿ ಕೋಟಾದ ಸೀಟುಗಳಿಗೆ ಮಾತ್ರ ಅನ್ವಯಿಸುವಂತೆ ಶೇ.10ರಷ್ಟು ಶುಲ್ಕವನ್ನು ಹೆಚ್ಚಿಸಿ ಸ್ನಾತಕ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಸೀಟುಗಳಿಗೆ ಈ ಕೆಳಕಂಡ ಕೋಷ್ಟಕದಲ್ಲಿ ನಮೂದಿಸಿರುವಂತ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.
ಇಲ್ಲಿದೆ ಶುಲ್ಕದ ಸಂಪೂರ್ಣ ವಿವರ
\