alex Certify BIGG NEWS : `7 ನೇ ವೇತನ ಆಯೋಗ’ದ ಅವಧಿ 2024 ರ ಮಾರ್ಚ್ 15 ರವರೆಗೆ ವಿಸ್ತರಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `7 ನೇ ವೇತನ ಆಯೋಗ’ದ ಅವಧಿ 2024 ರ ಮಾರ್ಚ್ 15 ರವರೆಗೆ ವಿಸ್ತರಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, 7 ನೇ ವೇತನ ಆಯೋಗದ ಅವಧಿಯನ್ನು 2024 ರ ಮಾರ್ಚ್ 15 ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದ ಪ್ರಕಾರ, ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನ ಇತ್ಯಾದಿಗಳನ್ನು ರೂಪಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ದಿನಾಂಕ:19-11-2022ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿರುತ್ತದೆ. ಕ್ರಮ ಸಂಖ್ಯೆ (4)ರಲ್ಲಿ ಓದಲಾದ ದಿನಾಂಕ:15-05-2023ರ ಸರ್ಕಾರಿ ಆದೇಶದಲ್ಲಿ ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿರುತ್ತದೆ. ಪ್ರಸ್ತುತ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯು ದಿನಾಂಕ:18-11-2023ಕ್ಕೆ ಕೊನೆಗೊಳ್ಳುತ್ತಿದ್ದು, ಸರ್ಕಾರವು ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿದೆ

7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ, ಆಯೋಗದ ಕಾಲಾವಧಿಯನ್ನು ದಿನಾಂಕ:15-03-2024 ರವರೆಗೆ ವಿಸ್ತರಿಸಿ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...