ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ಸರಬರಾಜು ಕಂಪನಿಗಲ ಸಬ್ ಸ್ಟೇಷನ್ ಗಳ ಬಳಿ ಸೋಲಾರ್ ಪಾರ್ಕ್ ಗಳ ಸ್ಥಾಪನೆಗೆ ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ ಪೈಕಿ ಬೆಸ್ಕಾಂ, ಸೆಸ್ಕಾಂ ಮತ್ತು ಹೆಸ್ಕಾಂ ಈಗಾಗಲೇ ಸೋಲಾರ್ ಪಾರ್ಕ್ ಗಳನ್ನು ಸ್ಥಾಪಿಸಲು ಭೂಮಿ ಗುರುತಿಸಿವೆ. ಉಳಿದ ವಿದ್ಯುತ್ ಸರಬರಾಜು ಕಂಪನಿಗಳಿಂದ ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿವೆ ಎಂದರು.
ಸೋಲಾರ್ ಪಾರ್ಕ್ ಸ್ಥಾಪನೆಯಿಂದ ಸ್ಥಳೀಯವಾಗಿ ವಿದ್ಯುತ್ ಹೆಚ್ಚಾಗಲಿದೆ. ಇದರಿಂದರಾಗಿ ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸಾಧ್ಯವಾಗಲಿದೆ.ಸೌರಶಕ್ತಿ ಚಾಲಿತ ನೀರಾವರಿ ಪಂಪ್ ಸೆಟ್ ಯೋಜನೆಯಡಿ ಇಂಧನ ಸಚಿವಾಲಯವು 4369 ಸೋಲಾರ್ ಪಂಪ್ ಸೆಟ್ ಗಳನ್ನು ಸ್ಥಾಪಿಸಿದೆ ಎಂದು ಮಾಹಿತಿ ನೀಡಿದ್ದಾರೆ.