ಬೆಂಗಳೂರು : ರಾಜ್ಯ ಸರ್ಕಾರವು 2022-23 ನೇ ಸಾಲಿನ ದೇವಸ್ಥಾನಗಳ ಜಿರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುದಾನ ಬಿಡುಗಡೆಗೆ ತಡೆ ಹಿಡಿಯುವಂತೆ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ ಅನುದಾನ ಬಿಡುಗಡೆಗೆ ಮೂರು ನಿರ್ದೇಶನದ ಮೂಲಕ ಹಣ ಹಂಚಿಕೆ ಮಾಡದಂತೆ ಸೂಚನೆ ನೀಡಿದೆ. ದೇವಸ್ಥಾನಗಳಿಗೆ ಹಣ ಬಿಡುಗಡೆಗೆ ತಡೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರದ ಆದೇಶದ ವಿರುದ್ಧ ಮುಜರಾಯಿ ಇಲಾಖೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಗರಂ ಆಗಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸುತ್ತೇನೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.