ಬೆಂಗಳೂರು : ಕಾಂಗ್ರೆಸ್ ಉಸ್ತುವಾರಿ ಟಿ.ಬಿ ಜಯಚಂದ್ರಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಟಿ.ಬಿ ಜಯಚಂದ್ರಗೆ ಹಲವು ಬಾರಿ ಕರೆಮಾಡಿ ಜೀವ ಬೆದರಿಕೆ ಹಾಕಲಾಗಿದೆ, ದೆಹಲಿ ಉಸ್ಯುವಾರಿಯಾಗಿದ್ದ ಟಿಬಿ ಜಯಚಂದ್ರ ಗೆ ಜೀವ ಬೆದರಿಕೆ ಹಾಕಿದ್ದು ಯಾರು..? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ. ನೀವು ಸೈಲೆಂಟ್ ಆಗಿರಬೇಡಿ, ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿಗೆ ಬೆದರಿಕೆ ಹಾಕಿದ್ದು ಯಾರು..? ಎಂದು ಪ್ರಶ್ನಿಸಿದ್ದಾರೆ.
ನೈಸ್ ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದೀರಿ. ಆ ಎಲ್ಲಾ ದಾಖಲೆ ಸಂಗ್ರಹ ಮಾಡಿದ್ದೇನೆ. ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಮಾಡುತ್ತೇನೆ. ನಾನು ದಾಖಲೆ ಕೊಡುತ್ತೇನೆ ರೈತರಿಗೆ ನ್ಯಾಯ ಕೊಡಿಸುತ್ತೇನೆ. ವರ್ಗಾವಣೆಯಲ್ಲಿ ಒಂದು ಸಾವಿರ ಕೋಟಿಗಿಂತ ಅಧಿಕ ಹಣ ಸಂಗ್ರಹ ಮಾಡಿದ್ದಾರೆ. ಒಂದೊಂದು ಪೋಸ್ಟ್ಗೆ ಮೂರು ನಾಲ್ಕು ಜನಕ್ಕೆ ಲೆಟರ್ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.