ನವದೆಹಲಿ : ಬರದ ಪರಿಸ್ಥಿತಿಯಲ್ಲೂ ತನ್ನ ಪಾಲಿನ ಕಾವೇರಿ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಕ್ಯಾತೆ ತೆಗೆದಿದ್ದು, ಇಂದು ಸುಪ್ರೀಂಕೋರ್ಟ್ ನಲ್ಲಿ ತುರ್ತು ಅರ್ಜಿ ವಿಚಾರಣೆ ನಡೆಸುವಂತೆ ಮನವಿ ಮಾಡಲಿದೆ.
ಕಾವೇರಿ ನೀರು ತಮಿಳುನಾಡಿಗೆ ಬಿಡುವಂತೆ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ತಮಿಳುನಾಡು ಮನವಿ ಮಾಡಲಿದೆ. ಸಿಜೆಐ ಪೀಠದ ಮುಂದೆ ಅರ್ಜಿ ಪ್ರಸ್ತಾಪಿಸಲು ತಮಿಳುನಾಡು ಸಿದ್ದತೆ ನಡೆಸಿದ್ದು, ಹಿರಿಯ ವಕೀಲ ಮುಕುಲ್ ರೋಹಟಗಿ ಅರ್ಜಿ ಪ್ರಸ್ತಾವನೆ ಸಲ್ಲಿಸಲಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಈಗಾಗಲೇ ಸುಪ್ರೀಂಕೋರ್ಟ್ ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತಮಿಳುನಾಡಿಗೆ ನೀರು ಬಿಡುತ್ತಿದೆ.ಆದರೆ ತಮಿಳುನಾಡಿಗೆ ಬಿಡಬೇಕಾದ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುವಂತೆ ಒತ್ತಾಯಿಸಲು ಅರ್ಜಿಯನ್ನು ತುರ್ತು ವಿಚಾರಣೆ ಮಾಡುವಂತೆ ಮನವಿ ಸಲ್ಲಿಸಲಿದೆ.